ಕೊಪ್ಪಳ ನೂತನ ಡಿಸಿ ಸುನಿಲ್ಕುಮಾರ್ ಅಧಿಕಾರ ಸ್ವೀಕಾರ
ಕೊಪ್ಪಳ 07: ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ 2011ರ ಬ್ಯಾಚ್ನ ಐಎಎಸ್ ಅಧಿಕಾರಿ ಪೊಮ್ಮಲ ಸುನೀಲ್ಕುಮಾರ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿದ್ದ ಎಂ. ಕನಗವಲ್ಲಿ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆಗೆ ವಗರ್ಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪೊಮ್ಮಲ ಸುನಿಲ್ ಕುಮಾರ್ ಅವರನ್ನು ಸಕರ್ಾರ ನೇಮಿಸಿ ಸೋಮವಾರವಷ್ಟೆ ಆದೇಶ ಹೊರಡಿಸಿತ್ತು. ಎಂ. ಕನಗವಲ್ಲಿ ಅವರು ನೂತನ ಜಿಲ್ಲಾಧಿಕಾರಿಗೆ ಹೂಗುಚ್ಛ ನೀಡುವ ಮೂಲಕ ಕೊಪ್ಪಳಕ್ಕೆ ಸ್ವಾಗತಿಸಿಕೊಂಡರು. ಎಂ. ಕನಗವಲ್ಲಿ ಅವರು, ಕಳೆದ 2015 ರ ನವೆಂಬರ್ ತಿಂಗಳಿನಲ್ಲಿ ಕೊಪ್ಪಳ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಮಾರು 02 ವರ್ಷ 09 ತಿಂಗಳುಗಳ ಸುದೀರ್ಘ ಅವಧಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಉತ್ತಮ ಜನಾನುರಾಗಿ ಕಾರ್ಯಗಳ ಮೂಲಕ ಜನಮನ್ನಣೆಗೆ ಪಾತ್ರರಾಗಿದ್ದರು.
ಮೂಲತಃ ಆಂಧ್ರಪ್ರದೇಶದ ಕಡಪ ಜಿಲ್ಲೆಯವರಾದ ಪೊಮ್ಮಲ ಸುನೀಲ್ಕುಮಾರ್ ಅವರು, ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪಡೆದಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಹಾಗೂ ಅಮೆರಿಕಾದ ನ್ಯೂಜೆಸರ್ಿಯಲ್ಲಿ ಸಾಫ್ಟ್ವೇರ್ ಕಂಪನಿಗಳಲ್ಲಿ ಸುಮಾರು 07 ವರ್ಷಗಳ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಈ ನೌಕರಿಗೆ ರಾಜೀನಾಮೆ ನೀಡಿ, ಶ್ರಮಪಟ್ಟು ವ್ಯಾಸಂಗ ಮಾಡಿ, ಯುಪಿಎಸ್ಸಿ ಪರೀಕ್ಷೆ ಬರೆದು, 2011 ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು. ಹಾಸನ ಜಿಲ್ಲೆಯಲ್ಲಿ ಐಎಎಸ್ ಟ್ರೈನಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ 04 ತಿಂಗಳು ಸೇವೆ ಸಲ್ಲಿಸಿದರು. ನಂತರ ಯಾದಗಿರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಯಾಗಿ 07 ತಿಂಗಳ ಸೇವೆ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ 02 ವರ್ಷ ಮೂರು ತಿಂಗಳ ಸೇವೆ. ಬೆಂಗಳೂರಿನಲ್ಲಿ ವಸತಿ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ರೆಗ್ಯುಲಾರಿಟಿ ಅಥಾರಿಟಿಯಲ್ಲಿ ಕಾರ್ಯದಶರ್ಿಗಳ ಹುದ್ದೆ, ಕಾಮರ್ಿಕ ಇಲಾಖೆಯ ಕಟ್ಟಡ ಕಾಮರ್ಿಕರ ಕಲ್ಯಾಣ ಮಂಡಳಿಯಲ್ಲಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಯಾಗಿ ವಗರ್ಾವಣೆಯಾಗುವುದಕ್ಕೂ ಮುನ್ನ ನಗರಾಭಿವೃದ್ಧಿ ಇಲಾಖೆಯ ಕನರ್ಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಜಂಟಿನಿದರ್ೇಶಕರ (ಸುಧಾರಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 