ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷ
Koppal district horticulture department's mango fair celebrates 10 years; many special features
ಕೊಪ್ಪಳ 12: ಮೇ 12 ತೋಟಗಾರಿಕೆ ಇಲಾಖೆ ವತಿಯಿಂದ ಮೇ 12 ರಿಂದ ಮೇ 22ರ ವರೆಗೆ 10 ದಿನಗಳ ಕಾಲ ಕೊಪ್ಪಳ ನಗರದಲ್ಲಿನ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣದಲ್ಲಿ ಆಯೋಜಿಸಲಾದ 10ನೇ ವರ್ಷದ ಮಾವು ಮೇಳಕ್ಕೆ ಮೇ 12ರಂದು ಚಾಲನೆ ಸಿಕ್ಕಿತು. ಈ ಮೇಳವು ಹಲವಾರು ವಿಶೇಷತೆಗಳನ್ನು ಹೊಂದಿದೆ. ದಶಕದ ಮಾವು ಮೇಳದ ಫಲವಾಗಿ ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 6500 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದು ಇವುಗಳಲ್ಲಿ ಮುಖ್ಯವಾಗಿ ಕೇಸರ್ ತಳಿಯು ಅತ್ಯಂತ ಬೇಡಿಕೆಯ ತಳಿಯಾಗಿದೆ ಹಾಗೂ ದಶಹರಿ, ತೋತಾಪೂರಿ, ಮಲ್ಲಿಕಾ, ಬೆನೆಶಾನ್, ಸಿಂಧೂರಿ, ಇಮಾಮ ಪಸಂದ, ಉಪ್ಪಿನಕಾಯಿ ತಳಿಗಳನ್ನು ಬೆಳೆಯತ್ತಿದ್ದು, ರೈತರ ಅನುಕೂಲಕ್ಕಾಗಿ ಹಾಗೂ ಗ್ರಾಹಕರಿಗೆ ಯೋಗ್ಯ ಬೆಲೆಗೆ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಲು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಈ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ಕೊಪ್ಪಳದಲ್ಲಿ ರೈತರು ಬೆಳೆದ ಜಗತ್ತಿನ ದುಬಾರಿ ಮಾವು ಮಿಯಾಜಾಕಿ ಮಾವನ್ನು ಮಾರಾಟಕ್ಕೆ ಇಡಲಾಗಿದೆ. ಈ ಮೇಳದಲ್ಲಿ ಹಿಂದಿನ ಮೇಳಕ್ಕಿಂತಲೂ 100ಕ್ಕೂ ಹೆಚ್ಚಿನ ರೈತರು ಭಾಗವಹಿಸಲು ಪೈಪೋಟಿ ಮೇಲೆ ತಾವು ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲು ಸ್ಟಾಲ್ಗಳನ್ನು ನೊಂದಾಯಿಸಿರುತ್ತಾರೆ. ವರ್ಷದಿಂದ ವರ್ಷಕ್ಕೆ ಸಾರ್ವಜನಿಕರಿಗೆ ನೇರವಾಗಿ ಮಾರಾಟ ಮಾಡಲು ರೈತರು ಹೆಚ್ಚಾಗಿ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ.*ವಿವಿಧ ಮಾವಿನ ತಳಿಯ ಹಣ್ಣು, ಉತ್ಪನ್ನಗಳು:*ಈ ಮೇಳದಲ್ಲಿ ಮೇಳದಲ್ಲಿ ಕೇಸರ್, ಬೆನೆಶಾನ್, ದಶಹರಿ, ರಸಪುರಿ, ಸ್ವರ್ಣರೇಖಾ, ಇಮಾಮ ಪಸಂಧ, ಆಪೋಸು, ಮಲ್ಲಿಕಾ, ತೋತಾಪೂರಿ, ಪುನಾಸ್ ಸೇರಿದಂತೆ 200ಕ್ಕೂ ಅಧಿಕ ವಿವಿಧ ಮಾವಿನ ತಳಿಗಳನ್ನು ಹಾಗೂ ಉಪ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿಡಲಾಗಿದೆ. ಜೊತೆಗೆ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದ ಮಾವಿನ ವಿವಿಧ ತಳಿಗಳನ್ನು ಸಹ ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗಿದೆ.*ಮಾವಿನ ಸೀಕರಣೆ ಲಭ್ಯ:*ಈ ಮೇಳದಲ್ಲಿ ಮಾವಿನ ಹಣ್ಣಿನ ರುಚಿಕರವಾದ ಸೀಕರಣೆಯನ್ನು ಸಹ ಮಾರಾಟ ಮಾಡಲಾಗುತ್ತಿದೆ ಹಾಗೂ ಉಪ್ಪಿನಕಾಯಿ ಮಾವನ್ನು ಸಹ ಮಾರಾಟ ಮಾಡಲಾಗುತ್ತಿದ್ದು,
ರೈತರೇ ತಯಾರಿಸಿದ ಉಪ್ಪಿನಕಾಯಿಗಳನ್ನು ಆಕರ್ಷಕವಾದ ಬಾಟಲ್ಗಳಲ್ಲಿ ಪ್ಯಾಕಿಂಗ್ ಮಾಡಿ ಮಾರಾಟ ಮಾಡಲಾಗುತ್ತಿದೆ. ಗಮನ ಸೆಳೆದ ದುಬಾರಿ ಮಾವು ‘ಮೀಯಾಜಾಕಿ’: ಈ ಮೇಳದದಲ್ಲಿ ಕೊಪ್ಪಳದ ರೈತರು ಬೆಳೆದ ಪ್ರಪಂಚದ ಅತ್ಯಂತ ದುಬಾರಿ ಮಾವಿನ ಹಣ್ಣಾದ “ಮೀಯಾಜಾಕಿ” ಎಂಬ ಜಪಾನ ತಳಿಯ ಹಣ್ಣನ್ನು ಪ್ರದರ್ಶನಕ್ಕೆ ಇಡಲಾಗಿದೆ ಹಾಗೂ ಮಾರಾಟ ಮಾಡಲಾಗುತ್ತಿದೆ. ಈ ಮಾವಿನ ತಳಿಯ ಬೆಲೆಯು 1 ಕೆ.ಜಿ.ಗೆ ರೂ. 2.50 ಲಕ್ಷ ಬೆಲೆ ಬಾಳುತ್ತದೆ. ಆದರೆ ಈ ತಳಿಯನ್ನು ಕೊಪ್ಪಳದಲ್ಲಿಯೇ ಬೆಳೆಯುತ್ತಿರುವುದರಿಂದ ಇದರ ಬೆಲೆಯನ್ನು ಪ್ರತಿ ಕೆ.ಜಿ.ಗೆ ರೂ. 2500 ರಿಂದ 3000 ರ ವರೆಗೂ ದರವನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಸಾಕಷ್ಟು ಗ್ರಾಹಕರು ಮುಂಗಡವಾಗಿ ಖರೀದಿಸಲು ಹಣ ಪಾವತಿಸಿರುತ್ತಾರೆ.*ಮಾವು ಮೇಳಕ್ಕೆ ದಶಕ; ಛಾಯಾಚಿತ್ರಗಳ ಪ್ರದರ್ಶನ:* 10 ವರ್ಷಗಳ ಕಾಲ ಮಾವು ಮೇಳದ ನಡೆದು ಬಂದ ದಾರಿ ಕುರಿತು ಪ್ರತಿ ವರ್ಷ ಮಾವು ಮೇಳದ 2016 ರಿಂದ 2026ರ ವರೆಗಿನ ಛಾಯಾಚಿತ್ರಗಳನ್ನು ಈ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿದೆ.
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 