ಕೋಟಿ ಕಂಠಗಾಯನ ಕಾರ್ಯಕ್ರಮ
ಶಿಗ್ಗಾವಿ 29: 67ನೇ ಕನ್ನಡರಾಜ್ಯೋತ್ಸವ ಅಂಗವಾಗಿ ಪಟ್ಟಣದ ಚನ್ನಪ್ಪಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕೋಟಿ ಕಂಠಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರತಿಯೊಬ್ಬರಲ್ಲೂ ನಾಡು-ನುಡಿಅಭಿಮಾನ ಮೂಡಿಸುವ ಸರಕಾರದ ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳು ಕರೋರೆ ಮ್ಯುಜಿಕ್ನೊಂದಿಗೆ ಸರಕಾರ ನಿಗದಿಪಡಿಸಿ ಆರು ಹಾಡುಗಳನ್ನು ಸುಮಧುರವಾಗಿ ಹಾಡಿದರು. ನನ್ನನಾಡು - ನನ್ನ ಹಾಡು ಶಿರ್ಷಿಕೆಯಲ್ಲಿ ಈ ಕಾರ್ಯಕ್ರಮ ಮೂಡಿ ಬಂದಿತು.
ಕಾರ್ಯಕ್ರಮದ ಕೊನೆಯಲ್ಲಿ ಕಾಲೇಜಿನ ಪ್ರಾಚಾರ್ಯ ಡಾ.ನಾಗರಾಜ ಜಿ. ದ್ಯಾಮನಕೊಪ್ಪ ಸಂಕಲ್ಪ ವಿಧಿ ಬೋಧಿಸಿದರು.ಇದೇ ಸಂದರ್ಭದಲ್ಲಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಜಿ. ಎಂ.ಅರಗೋಳ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸಿ.ಟಿ.ಪಾಟೀಲ, ಎಲ್ಲ ಸಿಬ್ಬಂದಿ ವರ್ಗದವರುಹಾಗೂ ಎಲ್ಲ ವಿಭಾಗಗಳ ವಿದ್ಯಾರ್ಥಿಗಳು ಹಾಜರಿದ್ದರು.