ಶಿಗ್ಗಾವ್

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ಲೋಕದರ್ಶನ ವರದಿ

ಶಿಗ್ಗಾವಿ : 67ನೇ ಕನ್ನಡರಾಜ್ಯೋತ್ಸವ ಅಂಗವಾಗಿ ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಇಂಟರ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋಟಿಕಂಠಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರತಿಯೊಬ್ಬರಲ್ಲೂ ನಾಡು-ನುಡಿ ಅಭಿಮಾನ ಮೂಡಿಸುವ ಸರಕಾರದ ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ವಿದ್ಯಾರ್ಥಿಗಳು ಕರೋರೆ ಮ್ಯುಜಿಕ್ನೊಂದಿಗೆ ಸರಕಾರ ನಿಗದಿಪಡಿಸಿ ಆರು ಹಾಡುಗಳನ್ನು ಸುಮಧುರವಾಗಿ ಹಾಡಿದರು.

ಚನ್ನಪ್ಪ ಕುನ್ನೂರ ಇಂಟರ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಶಿವು ಹಾವೇರಿ ಸಂಕಲ್ಪ ವಿಧಿ ಬೋಧಿಸಿದರು. ಶಿಕ್ಷಕರು ಎಲ್ಲ ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು 

ಸುದ್ದಿ ಓದಿ