ಕೊವಿದ್-19: ತಬ್ಲಿಘಿ ಸಭೆಯಲ್ಲಿ ಪಾಲ್ಗೊಂಡಿದ್ದ ಬೀದರ್ ನ 11 ಮಂದಿಗೆ ಸೋಂಕು ದೃಢ
ಬೀದರ್, ಏಪ್ರಿಲ್ 2 , ಇತ್ತೀಚೆಗೆ ನವದೆಹಲಿಯ ನಜಾಮುದ್ದೀನ್ ದರ್ಗಾದಲ್ಲಿ ನಡೆದ ಮಾರ್ಕಾಜ್‌ಗೆ ಹಾಜರಾಗಿದ್ದ ಜಿಲ್ಲೆಯ 27 ತಂಡದ ಭಾಗವಾಗಿದ್ದ ಕನಿಷ್ಠ 11 ಜನರಲ್ಲಿ ಕೊವಿದ್-19 ಸೋಂಕು ದೃಢಪಟ್ಟಿದೆ ಎಂದು ಬೀದರ್ ಜಿಲ್ಲಾಧಿಕಾರಿ ಎಚ್ ಸಿ ಮಹದೇವ್ ಗುರುವಾರ ತಿಳಿಸಿದ್ದಾರೆ.ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಹಾದೇವ್ ಅವರು, ಕಲಬುರಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ 27 ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ಇದು ದೃಢಪಟ್ಟಿದೆ. ಕೊವಿದ್ -19 ಸೋಂಕಿತ ಎಲ್ಲ ರೋಗಿಗಳನ್ನು ಸಂಪರ್ಕತಡೆ(ಕ್ವಾರಂಟೈನ್)ನಲ್ಲಿ ಇರಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್) ನಲ್ಲಿರುವ ಪ್ರತ್ಯೇಕ ವಾರ್ಡ್‌ನಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ದೆಹಲಿಗೆ ಹೋಗಿ ಬಂದಿದ್ದವರ ಜೊತೆ ದ್ವಿತೀಯ ಸಂಪರ್ಕದ 98 ಜನರನ್ನು ಸಹ ಗುರುತಿಸಲಾಗಿದೆ. ಇವರೆಲ್ಲರನ್ನು ಗೃಹ ಸಂಪರ್ಕತಡೆಯಲ್ಲಿ ಇರುವಂತೆ ಕಟ್ಟು ನಿಟ್ಟಾಗಿ ಸೂಚಿಸಲಾಗಿದೆ ಎಂದು ಮಹದೇವ್ ಹೇಳಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 