ಕೊವಿದ್ -19 ದಿಢೀರ್ ಉಲ್ಬಣ ಹಿನ್ನೆಲೆ: ಶ್ರೀಲಂಕಾದಲ್ಲಿ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ
ಕೊಲಂಬೊ, ಮಾರ್ಚ್ 20,ದ್ವೀಪ ದೇಶದಲ್ಲಿ ಕೊವಿದ್-19 ಹರಡುವುದನ್ನು ತಡೆಯಲು ಶ್ರೀಲಂಕಾ ಸರ್ಕಾರ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಿಸಿದ್ದು, ಇದು ಶುಕ್ರವಾರ ಸಂಜೆ 6:00 ರಿಂದ ಜಾರಿಗೆ ಬರಲಿದ್ದು, ಸ್ಥಳೀಯ ಕಾಲಮಾನ ಸೋಮವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳುತ್ತದೆ.
ದೇಶದ ಎಲ್ಲ ಜನರು ಕರ್ಫ್ಯೂಗೆ ಬದ್ಧರಾಗಿ ಮನೆಯೊಳಗೆ ಇರಬೇಕೆಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ಸೂಚಿಸಿದೆ.ಶುಕ್ರವಾರದಿಂದ ಏಳುದಿನ ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುವಂತೆ ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಗುರುವಾರ ಘೋಷಿಸಿದ್ದರು. ಮಾರ್ಚ್ 27 ರವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀಲಂಕಾದಲ್ಲಿ ಇದುವರೆಗೆ ಕೊವಿದ್ -19ನ 59 ಪ್ರಕರಣಗಳು ದೃಢಪಟ್ಟಿದ್ದು, ಇತರ 230 ಕ್ಕೂ ಹೆಚ್ಚು ಶಂಕಿತ ಪ್ರಕರಣಗಳ ಮೇಲೆ ದೇಶದ ವಿವಿಧ ಆಸ್ಪತ್ರೆಗಳಲ್ಲಿ ನಿಗಾವಹಿಸಲಾಗಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 