ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಮೂವರು ಆರೋಪಿತರು ಅಂದರ್ ; ಕೆಲವು ಪ್ರಮುಖ ಸಾಮಗ್ರಿಗಳು ಪೊಲೀಸರ ವಶಕ್ಕೆ
ಬೆಳಗಾವಿ, ಸೆ, 16 : ಬೆಳಗಾವಿ ಜಿಲ್ಲೆಯಲ್ಲಿ ನಡೆದ ಕೆಪಿಟಿಸಿಎಲ್ ಪರೀಕ್ಷೆ ಅಕ್ರಮವು ಅಗೆದಷ್ಟು ಆಳವಾಗಿ ಸಾಗುತ್ತಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೆ ಮೂವರನ್ನು ಪತ್ತೆ ಮಾಡುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸದ್ಯ ಈ ಪ್ರಕರಣದಲ್ಲಿ ಜಿಲ್ಲೆಯ ಗೋಕಾಕ ತಾಲೂಕಿನ ಅರಭಾವಿಯ ಅಕ್ಷಯ್ ದುಂದಪ್ಪ ಭಂಡಾರಿ ಈತನನ್ನು ಬಂಧಿಸಲಾಗಿದೆ. ಈತ ಖಾಸಗಿ ಉದ್ಯೋಗಿಯಾಗಿದ್ದು, ಈತನು ಬೆಂಗಳೂರುದಿಂದ ಇಲೆಕ್ಟ್ರಾನಿಕ್ ಡಿವೈಸ್ ತಂದು ಸಂಜು ಭಂಡಾರಿ ಈತನಿಗೆ ನೀಡಿದ್ದಾನೆ. ಹಾಗೂ ಇಲೆಕ್ಟ್ರಾನಿಕ್ ಡಿವೈಸ್ ಗಳನ್ನು ಬದಲಾಯಿಸಿದ್ದಾನೆ. ಈತನಿಂದ 1 ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಪಾಯಿ ಮಾಡಿದ ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಲಾಗಿದೆ.
ಅದರಂತೆ ಗೋಕಾಕ ತಾಲೂಕಿನ ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟಿ (24) ಈತನ್ನು ಬಂಧಿಸಲಾಗಿದ್ದು, ಈತನು ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿದವನಾಗಿದ್ದಾನೆ. ಈತನಿಂದ ಒಂದು ಮೊಬೈಲ್ ಮತ್ತು ಒಂದು ಮೋಟಾರ್ ಸೈಕಲ್ ಜಪ್ತಿ ಮಾಡಲಾಗಿದೆ.
ಅದರಂತೆ ರಾಜಾಪೂರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ( 22), ಬಂಧಿಸಲಾಗಿದ್ದು, ಈತನು ವಿದ್ಯಾರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟವನಾಗಿದ್ದಾನೆ. ಈತನಿಂದ ಪೊಲೀಸರು ಒಂದು ಮೊಬೈಲ್ ಜಪ್ತಿ ಮಾಡಿದ್ದಾರೆ. ಈ ಮೂರು ಜನ ಅರೋಪಿತರು ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.