ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ

ಶೇಡಬಾಳ 16: ಬ್ರಿಟಿಷರ್ ಪಾಲಿಗೆ ಸಿಂಹಸ್ವಪ್ನವಾಗಿದ್ದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಕಾರ್ಯಕ್ರಮ ಶೇಡಬಾಳ ಪಟ್ಟಣದಲ್ಲಿ ವಿಜೃಂಭಣೆಯಿಂದ ಜರುಗಿತು.  

ಇಲ್ಲಿನ ಕುರುಬ ಸಮಾಜ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಗೋಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಗ್ರಾಮದಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು. ಬೀರ ದೇವರ ದೇವಾಲಯದಿಂದ ಪ್ರಾರಂಭವಾದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯ ಮುಂದೆ ಅನೇಕ ಡೊಳ್ಳು ವಾದಕ ತಂಡಗಳು ಭಾಗವಹಿಸಿ ತಮ್ಮ ಕಲಾ ಪ್ರದರ್ಶನವನ್ನು ನೀಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಮತ್ತೇ ಬೀರ ದೇವರ ದೇವಾಲಯಕ್ಕೆ ಬಂದು ಮೆರವಣಿಗೆ ಮುಕ್ತಾಯಗೊಂಡಿತು. ಸಾಯಂಕಾಲ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಕಾರ್ಯಕ್ರಮದ ಅಂಗವಾಗಿ ಮಹಾಪ್ರಸಾದ ಸಮಾಜದವರು ಏರಿ​‍್ಡಸಿದ್ದರು.  

ಈ ಸಮಯದಲ್ಲಿ ಕುರುಬ ಸಮಾಜದ ಅನೇಕ ಮುಖಂಡರು, ಪಟ್ಟಣ ಪಂಚಾಯತ ಸದಸ್ಯರು, ಗ್ರಾಮಸ್ಥರು, ಅಪಾರ ಸಂಖ್ಯೆಯಲ್ಲಿ ಇದ್ದರು.