ಜಿಲ್ಲಾಡಳಿತದಿಂದ ಕ್ರಾಂತೀವೀರ ಸಂಗೊಳ್ಳಿರಾಯಣ್ಣ ಜಯಂತಿ ಆಚರಣೆ
ಬಳ್ಳಾರಿ 16: ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ನಮಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ಕೆ.ರಂಗಣ್ಣನವರ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.