ಇಂಡಿ ತಹಶೀಲದಾರ ಕಾರ್ಯಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
ಇಂಡಿ 26: ಇಂಡಿ ನಗರದ ಇಂಡಿ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಇಂಡಿ ಗ್ರೇಡ್ 2 ತಹಶೀಲ್ದಾರ್ ಧನಪಾಲ್ ಶೆಟ್ಟಿ ದೇವೂರ ಅವರು ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಧನಪಾಲ್ ಶೆಟ್ಟಿ ದೇವೂರ ಅವರು ಹಿಂದೂಗಳ ಹಬ್ಬವಾದ ಜನ್ಮಾಷ್ಟಮಿಯನ್ನು ವಿಷ್ಣುವಿನ ಎಂಟನೇ ಅವತಾರವಾದ ಭಗವಾನ್ ಕೃಷ್ಣನ ಜನ್ಮ ದಿನವೆಂದು ಆಚರಿಸಲಾಗುವುದು. ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26 ರಂದು ಆಚರಿಸಲಾಗುವುದು. ಈ ಶುಭ ದಿನದಂದು ಜನರು ಶ್ರೀಕೃಷ್ಣನನ್ನು ಪೂಜಿಸಿ, ಮಂತ್ರ, ಭಜನೆಯನ್ನು ಹಾಡಿ, ಉಪವಾಸ ವ್ರತವನ್ನು ತೆಗೆದುಕೊಳ್ಳುತ್ತಾರೆ. ಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದನೆಂದು ನಂಬಲಾದ ಭಕ್ತರು ಜನ್ಮಾಷ್ಟಮಿಯ ತಡರಾತ್ರಿಯಲ್ಲಿ ಕೃಷ್ಣನಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ದೇವಾಲಯಗಳನ್ನು ಮತ್ತು ಮನೆಗಳನ್ನು ವಿಶಿಷ್ಟವಾಗಿ ಅಲಕಂರಿಸಲಾಗುತ್ತದೆ ಮತ್ತು ದೇವರ ವಿಗ್ರಹಗಳಿಗೆ ಹೊಸ ಬಟ್ಟೆಗಳನ್ನು ಧರಿಸಿ ಅದನ್ನು ಹೂವುಗಳಿಂದ ಅಲಂಕರಿಸುತ್ತಾರೆ. ಅದರಂತೆ ನಾವು ನಮ್ಮ ಕಾರ್ಯಲಯದ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದರು. ಶೀರಸದಾರ ಎಸ್ ಆರ್ ಮುಜಗೊಂಡ, ಎಸ್ ಎಚ್ ಗುನ್ನಾಪೂರ, ಪ್ರಕಾಶ್ ಚವಡಿಹಾಳ, ಎಮ್ ಕೆ ಕೊಡತೆ, ತಾಲೂಕು ಪಂಚಾಯಿತಿ ಮ್ಯಾನೇಜರ್ ಮುರುಗೇಶ್ ನಾರಾಪೂರ, ಎಸ್ ಎಚ್ ಪಾಟೀಲ, ಬಸವರಾಜ ಕಟಾಯಿ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.