ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
ವಿಜಯಪುರ 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ದರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರಿ್ಡಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ ಮೊಡಕೆ ಒಡೆಯಲು ಹತ್ತುವ ಬೀಳುವ ಮೋಜು ಎಲ್ಲರಿಗೂ ಮನರಂಜನೆಯನ್ನುಂಟು ಮಾಡಿತು. ಅಲ್ಲದೇ, ಎಲ್ಲ ವಿದ್ಯಾರ್ಥಿಗಳು ಬಾಲಗೋಪಾಲನಂತೆ ಕಂಗೊಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ. ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ವಿದ್ಯಾರ್ಥಿಗಳು, ಪೋಷಕರು, ಶಾಲೆಯ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 