ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೋಳೂರಗೆ ಸನ್ಮಾನ
Kudos to Kollore for winning first place in the state
ತಾಳಿಕೋಟಿ 18 : ಮೈಲೇಶ್ವರದ ಪ್ರತಿಷ್ಠಿತ ಮಾರುತಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಪರೀಕ್ಷೆ-1ರ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಮಾರುತಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 2025-26 ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕುಮಾರಿ ಗಂಗಾ ಅಶೋಕ ಕೋಳೂರ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಳು. ಇದೀಗ ಮರು ಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ಗಂಗಾ ಕೋಳೂರ 625ಕ್ಕೆ 625 ಅಂಕಗಳು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಕಾರ್ಯಕ್ರಮದಲ್ಲಿ ಮಾರುತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಬ್ರಿಲಿಯಂಟ್ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 