ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಜೊತೆ ಒಪ್ಪಂದವಿಲ್ಲ ಪಾಕ್ ಸ್ಪಷ್ಟಣೆ
ಇಸ್ಲಾಮಾಬಾದ್, 15 : ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಐಸಿಜೆ ನೀಡಿರುವ ತೀರ್ಪುನ ಜಾರಿ ಕುರಿತು ಪಾಕ್ ಸಂವಿಧಾನದ ನಿಯಮಾವಳಿಗಳ ಪ್ರಕಾರವೇ ತೀರ್ಮಾನ ತೆಗೆದುಕೊಳ್ಳಲಾಗುವುದು ಹೇಳಿದೆ. ಜಾಧವ್ ಪ್ರಕರಣ ಮರುಪರಿಶೀಲನೆ ಮಾಡಲು ಪಾಕಿಸ್ತಾನ ಕಾನೂನಿನ ಬೇರೆ ಬೇರೆ ಅವಕಾಶ ಆಯ್ಕೆಗಳನ್ನು ಪರಶೀಲಿಸಲಾಗುತ್ತಿದೆ ಎಂದೂ ಸೇನೆ ಈ ಮೊದಲು ಹೇಳಿತ್ತು. ಈ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಒಳಗಾಗಿರುವ ಪ್ರಕರಣದಲ್ಲಿ ಭಾರತದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲಎಂದು ಹೇಳಿದೆ . ಸಂವಿಧಾನದ ಪ್ರಕಾರ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ನಿರ್ದೇಶನಗಳನ್ನು ಜಾರಿಗೊಳಿಸಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ ಜಾಧವ್ ಅವರಿಗೆ 2017ರ ಏಪ್ರಿಲ್ 10ರಂದು ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 