ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ
ಬೆಂಗಳೂರು, ಜ. 30, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.ರಸ್ತೆ ಸಾರಿಗೆ ಮತ್ತು ಅಧೀನ ಸಂಸ್ಥೆಗಳಾದ ವಾಯವ್ಯ ,ಈಶಾನ್ಯ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿಗಳಲ್ಲಿ ನೂರಾರು ನೌಕರರು ಸರ್ಕಾರಿ ಸೌಲಭ್ಯವಿಲ್ಲದೆ ಸೂಕ್ತ ವೇತನವಿಲ್ಲದೆ ದುಡಿಯುತ್ತಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷ ಘೋಷಿಸಿದಂತೆ ಮೈತ್ರಿ ಸರ್ಕಾರದಲ್ಲಿ ರೈತರ ಸಾಲಮನ್ನಾ, ಔರಾದ್ಕರ್ ವರದಿ ಜಾರಿ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಸ್ತೆ ಸಾರಿಗೆ ನಿಗಮದ ನೌಕರರ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಗಮದ ನೌಕರರನ್ನು ಪೂರ್ಣಪ್ರಮಾಣದ ಸರ್ಕಾರಿ ನೌಕರರೆಂದು ತೀರ್ಮಾನಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿತ್ತಾದರೂ ಅಷ್ಟರಲ್ಲಿ ಮೈತ್ರಿ ಸರ್ಕಾರ ಪತನಗೊಂಡಿತು. ಹೀಗಾಗಿ ಆಡಳಿತಾರೂಢ ಬಿಜೆಪಿ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಕುಮಾರಸ್ವಾಮಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯಿಸಿ ಸಾರಿಗೆ ಸಂಸ್ಥೆಯ ನೌಕರರು ಹಲವು ಬಾರಿ ಧರಣಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 