ಸ್ಫೂರ್ತಿ ಅಸೋಸಿಯೇಷನ್ನಿಂದ ಕುಂಕುಮಾರ್ಚನೆ ಹಾಗೂ ಲಲಿತಾ ಸಹಸ್ರನಾಮ ಪಠಣ
Kunkumarchana and Lalita Sahasranama Chanting by Spoorthi Association
ಲೋಕದರ್ಶನ ವರದಿ
ಬೆಳಗಾವಿ 16 : ಸಮಾಜದ ಸಂಪ್ರದಾಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ಶ್ರಾವಣ ಅಥವಾ ಭಾದ್ರಪದ ಮಾಸದ ಶುಕ್ಲ ಪಕ್ಷದಲ್ಲಿ ಅರ್ಥಪೂರ್ಣ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಸ್ಫೂರ್ತಿ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷೆ ಜ್ಯೋತಿ ಭಾವಿಕಟ್ಟಿ ಹೇಳಿದರು. ನಗರದ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಸ್ಫೂರ್ತಿ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 13ನೇ ವರ್ಷದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ ಪಠಣ ಹಾಗೂ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರ ಆರೋಗ್ಯ, ಕುಟುಂಬದ ಶ್ರೇಯಸ್ಸು ಹಾಗೂ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧಿಯಾಗಲಿ ಎಂಬ ಸಂಕಲ್ಪದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ 268ಕ್ಕೂ ಅಧಿಕ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ ಲಲಿತಾ ಸಹಸ್ರನಾಮ ಪಠಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷೆ ಜ್ಯೋತಿ ಭಾವಿಕಟ್ಟಿ, ಉಪಾಧ್ಯಕ್ಷೆ ಲಲಿತಾ ಹೂಗಾರ, ಕಾರ್ಯದರ್ಶಿ ದಾನಮ್ಮ ಅಂಗಡಿ, ಸಹಕಾರ್ಯದರ್ಶಿ ಶ್ರೀದೇವಿ ನಾಗರಾಳ, ಸಂಸ್ಥಾಪಕರಾದ ಶ್ವೇತಾ ಪಾಟೀಲ ಹಾಗೂ ಅನಿತಾ ಚಟ್ಟೇರ, ಸಲಹಾ ಸಮಿತಿ ಬಳಗದ ಸದಸ್ಯೆಯರು ಹಾಗೂ ನಿರ್ದೇಶಕರಾದ ಲಕ್ಷ್ಮೀ ಗವಜಿ, ಪ್ರೇಮಾ ಮಮದಾಪುರ, ಕವಿತಾ ಆರ್., ಪೂರ್ಣಿಮಾ ಹಿರೇಮಠ, ಸಾಕ್ಷಿ ಕೇಳ್ವೆಕರ್ ಮತ್ತು ನಿವೇದಿತಾ ಮಾಸ್ತಿಹೋಳಿಮರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 