ಕುಷ್ಟಗಿ: ವಿವಿಧ ಆಗ್ರೋ ಕೇಂದ್ರಗಳಿಗೆ ಡಿಸಿ ಭೇಟಿ: ಪರೀಶೀಲನೆ
Kustagi: DC visits various agro centers: Review
ಕೊಪ್ಪಳ 19 : ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ವಿವಿಧ ಆಗ್ರೋ ಕೇಂದ್ರಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿ, ರಸಗೊಬ್ಬರ ಪೂರೈಕೆ ಕುರಿತು ಪರೀಶೀಲಿಸಿದರು.
ಯೋಜನೆ ಪ್ರಕಾರ ರಸಗೊಬ್ಬರ ರೈತರಿಗೆ ಮಾರಾಟ ಮಾಡಬೇಕು ಎಂದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಬರುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಪಡಬೇಕಿಲ್ಲ. ಯೂರಿಯಾ ರಸಗೊಬ್ಬರ ಬಳಕೆಯನ್ನು ರೈತರು ಆದಷ್ಟು ಕಡಿಮೆ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ. ಎಸ್. ಕೃಷಿ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಸೇರಿದಂತೆ ವಿವಿಧ ರಸಗೊಬ್ಬರಗಳ ಅಂಗಡಿಗಳ ಮಾಲೀಕರು ಮತ್ತು ರೈತರು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 