ಲೋಡ್ ಶೆಡ್ಡಿಂಗ್ ವಿರೋಧಿಸಿ ಹೆದ್ದಾರಿ ತಡೆ
ಲೋಡ್ ಶೆಡ್ಡಿಂಗ್ ವಿರೋಧಿಸಿ ಹೆದ್ದಾರಿ ತಡೆ
ಬೆಳಗಾವಿ 12: ರೈತರ ಹೊಲಗದ್ದೆಗಳಿಗೆ ಸಮರ್ಕ ಹಾಗೂ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಹಾಗೂ ಲೋಡ್ ಶೆಡ್ಡಿಂಗ್‌ನಿಂದ ರೈತರಿಗೆ ಉಂಟಾಗುತ್ತಿರುವ ತೊಂದರೆ ಖಂಡಿಸಿ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ್ಪ್ಛೈಷ್ಣ್ಝ್ತಹಿ್ಣೈಷ್ಚ್ಯೂಳ್ಪಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿರುವ ಕೆಇಬಿ ಕಚೇರಿ ಬಳಿ ಬಿಜೆಪಿ ಗ್ರಾಮೀಣ ಮಂಡಳದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಮೂರು ‘ಕೋತಿಗಳಿವೆ’ ಎಂದು ವ್ಯಂಗ್ಯವಾಡಿದ ಅವರು, “ಸಿದ್ದರಾಮಯ್ಯ ಅವರಿಗೆ ಕಾಣುವುದಿಲ್ಲ, ಡಿ.ಕೆ. ಶಿವಕುಮಾರ್ ಅವರಿಗೆ ಹೇಳುವುದಿಲ್ಲ, ಇಲ್ಲಿನ ಶಾಸಕಿ ಲಕ್ಷ್ಮೀಬಾಯಿ ಇತ್ತ ನೋಡುವುದೇ ಇಲ್ಲ” ಎಂದು ಲೇವಡಿ ಮಾಡಿದರು.
ರೈತರು ಬೆಳೆ ಬೆಳೆಯಲು ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆ ಮಾಡುವಂತೆ ಮಾತ್ರ ಒತ್ತಾಯಿಸುತ್ತಿದ್ದಾರೆ. ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹೆಸ್ಕಾಂ ಅಧಿಕಾರಿಗಳ ಮೂಲಕ ಸಮರ್ಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ರೈತರ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು,” ಎಂದು ಸಂಜಯ ಪಾಟೀಲ ಹೇಳಿದರು.
ಬಳಿಕ ಯಲ್ಲೇಶ್ ಕೊಲಕಾರ ಮಾತನಾಡಿ, ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಹೆಸ್ಕಾಂ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಯುವರಾಜ ಜಾಧವ, ಮಾಜಿ ಶಾಸಕ ಸಂಜಯ ಪಾಟೀಲ, ಧನಂಜಯ ಜಾಧವ, ಯಲ್ಲೇಶ್ ಕೊಲಕಾರ, ಮಂಜು ಪಾಟೀಲ, ನಿತಿನ್ ಚೌಗಲೆ ಸೇರಿದಂತೆ ರೈತ ಮುಖಂಡರು, ಬಿಜೆಪಿ ಕಾರ್ಯಕರ್ತರು ಹಾಗೂ ಪಂತ ಬಾಳೇಕುಂದ್ರಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ಭಾಗವಹಿಸಿದ್ದರು.