ರಾಯಬಾಗ

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ: ಪೋಷಕರು ಸದುಪಯೋಗ ಪಡೆಯಲಿ – ಕೆ.ಆರ್. ಕೋಟಿವಾಲೆ

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ: ಪೋಷಕರು ಸದುಪಯೋಗ ಪಡೆಯಲಿ – ಕೆ.ಆರ್. ಕೋಟಿವಾಲೆ

ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಸರಕಾರದಿಂದ ಪ್ರಾರಂಭಿಸಲಾದ ಎಲ್‌ಕೆಜಿ ಮತ್ತು ಯುಕೆಜಿ ನೂತನ ತರಗತಿ ಕೋಣೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ.ಆರ್. ಕೋಟಿವಾಲೆ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಹೇಳಿದರು. ಪೋಷಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸರ್ಕಾರಿ ಶಾಲೆಗಳಲ್ಲಿ ಹಾಗೂ ಸರ್ಕಾರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದ ಅವರು, ಇದರಿಂದ ಸರ್ಕಾರಿ ಶಾಲೆಗಳು ಬಲಪಡೆದು ಗುಣಮಟ್ಟದ ಶಿಕ್ಷಣಕ್ಕೂ ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಮಿತ್ ಜಾಧವ, ಸದಸ್ಯ ಪೃಥ್ವಿರಾಜ ಜಾಧವ, ಕೆಡಿಪಿ ಸದಸ್ಯ ಸಂತೋಷ ಸಾವಂತ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ವಂಜೇರಿ, ಗ್ರಾ.ಪಂ. ಸದಸ್ಯರಾದ ಮಂಜುನಾಥ ಸಂಗೋಟಿ, ಬಾಳಪ್ಪ ಕರೋಲೆ, ಮುಖ್ಯ ಶಿಕ್ಷಕರು ಕಾಡಾಪುರೆ ಹಾಗೂ ರಮೇಶ ಮಾಳಿ, ಭಜಂತ್ರಿ ಸೇರಿದಂತೆ ಹಲವಾರು ಪಾಲಕರು ಉಪಸ್ಥಿತರಿದ್ದರು.

ಸುದ್ದಿ ಓದಿ