ಮುಂದಿನ ತಿಂಗಳು ಎಲ್ ಪಿ ಜಿ ಬೆಲೆ ಇಳಿಕೆ : ಪ್ರಧಾನ್ ಸುಳಿವು
pradhan
ರಾಂಚಿ , ಫೆ 20 : ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂಬ ಸುಳಿವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಸಚಿವ ಧರ್ಮೇಂದ್ರ ಪ್ರಧಾನ್ ವ್ಯಕ್ತಪಡಿಸಿದ್ದಾರೆ.
ಖಾರ್ಖಂಡ್ ಪ್ರವಾಸದಲ್ಲಿರುವ ಅವರು ಇಲ್ಲಿನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಎಲ್‌ಪಿಜಿ ಸಿಲಿಂಡರ್ ಬೆಲೆಗಳ ನಿರಂತರ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ಎಲ್‌ಪಿಜಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದು ವಾಸ್ತವಿಕವಾಗಿ ನಿಜವಲ್ಲ. ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಾರಣ ದರ ಹೆಚ್ಚಾಗಿದೆ ಆದರೆ ಮುಂದಿನ ದಿನಗಳಲ್ಲಿ ಬೆಲೆಗಳು ಖಂಡಿತವಾಗಿ ಕಡೆಮೆಯಾಗಲಿದೆ ಎಂಬ ಸುಳಿವು ನೀಡಿದರು.
ಚಳಿಗಾಲದಲ್ಲಿ, ಎಲ್ಪಿಜಿ ಬಳಕೆ ಹೆಚ್ಚಾಗುತ್ತದೆ, ಇದು ವಲಯದ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ಈ ತಿಂಗಳು ಬೆಲೆ ಏರಿಕೆಯಾದರೆ ಮುಂದಿನ ತಿಂಗಳು ಕಡಿಮೆಯಾಗಲಿದೆ ಎಂದರು.
ಕಳೆದ ವಾರ, ಅಡುಗೆ ಅನಿಲ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 144.ರೂಪಾಯಿ ಏರಿಸಲಾಗಿತ್ತು ಇದಕ್ಕೆ ಸಾರ್ವಜನಿಕ ವಲಯದಲ್ಲೂ ಭಾರಿ ಆಕ್ರೋಶ ಸಹ ವ್ಯಕ್ತವಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 