ಸೆ. 16ರವರೆಗೆ ಕಾರ್ಮಿಕ ಅದಾಲತ್
ಬಳ್ಳಾರಿ 23: ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕ ಅದಾಲತ್ ಆ.16ರಿಂದ ಪ್ರಾರಂಭವಾಗಿದ್ದು, ಸೆ.16ವರೆಗೆ ನಡೆಯಲಿದೆ ಎಂದು ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ, ಅರ್ಜಿಗಳು ಬಾಕಿ ಇದ್ದಲ್ಲಿ, ವಿವಾದಗಳು ಇತ್ಯರ್ಥವಾಗದೇ ಇದ್ದಲ್ಲಿ ಅದಾಲತ್ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.
ಉಪಕಾರ್ಮಿಕ ಆಯುಕ್ತರ ಕಚೇರಿ, ಸಹಾಯಕ ಆಯುಕ್ತರ ಕಚೇರಿ,ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಮತ್ತು ಆಯಾ ತಾಲೂಕಿನ ಕಾರ್ಮಿಕ ನೀರೀಕ್ಷಕರ ಕಚೇರಿಗಳಿಗೆ ಭೇಟಿ ನೀಡಿ, ಪ್ರತಿದಿನ ಬೆಳಗ್ಗೆ 10.30ರಿಂದ ಸಂಜೆ 4.30ರ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ನಿಯಮಾನುಸಾರ ಪರೀಶೀಲಿಸಿ ಶೀಘ್ರವಾಗಿ ಇತ್ಯರ್ಥಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.