ಲಗಲೂರು ಗ್ರಾಮದಲ್ಲಿ ಮೂಲಸೌಕರ್ಯ ಕೊರತೆ
Lack of basic amenities in Lagaluru village
ಯಲಬುರ್ಗಾ 26: ಗ್ರಾಮೀಣ ಜನರಿಗೆ ಮೂಲಸೌಕರ್ಯ ಒದಗಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುದಾನ ನೀಡುತ್ತಿದ್ದರೂ, ತಾಲ್ಲೂಕು ಕೇಂದ್ರದ ಸಮೀಪದ ಲಗಲೂರು ಗ್ರಾಮದಲ್ಲಿ ಅವುಗಳ ಸದ್ಬಳಕೆ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ನಿಯಮಿತವಾಗಿ ಕಸ ವಿಲೇವಾರಿ ನಡೆಯದಿರುವುದು, ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡದಿರುವುದರಿಂದ ಸ್ವಚ್ಛತೆ ಸಮಸ್ಯೆ ಉಲ್ಬಣಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಇದರಿಂದ ಮಕ್ಕಳ ಹಾಗೂ ವೃದ್ಧರು ಸೇರಿದಂತೆ ಗ್ರಾಮಸ್ಥರ ಆರೋಗ್ಯದ ಬಗ್ಗೆ ಆತಂಕ ಎದುರಾಗಿದೆ. ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದೆ.
ಚರಂಡಿ ಸಮಸ್ಯೆ: ನಿರ್ಮಿಸಿರುವ ಚರಂಡಿಗಳು ಸಂಪೂರ್ಣವಾಗಿ ತುಂಬಿಕೊಂಡಿದ್ದು, ನೀರು ಸರಾಗವಾಗಿ ಹರಿಯದೆ ದುರ್ವಾಸನೆ ಬೀರುತ್ತಿದೆ. ಇದರಿಂದ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುವ ಆತಂಕವಿದೆ.
ಶುದ್ಧ ಕುಡಿಯುವ ನೀರಿನ ಕೊರತೆ: ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ದುರಸ್ತಿಪಡಿಸದೆ ಇರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಶಾಲಾ ಆವರಣದಲ್ಲೂ ಸ್ವಚ್ಛತೆ ಕೊರತೆ: ಸುಸಜ್ಜಿತ ಶಾಲಾ ಕಟ್ಟಡವಿದ್ದರೂ ಆವರಣದಲ್ಲಿ ಗಿಡಗಂಟಿಗಳು ಬೆಳೆದು, ಕಸ ತುಂಬಿಕೊಂಡಿದೆ. ಮಕ್ಕಳ ಕುಡಿಯುವ ನೀರಿನ ತೊಟ್ಟಿಯ ಸುತ್ತಲೂ ತ್ಯಾಜ್ಯ ಸಂಗ್ರಹವಾಗಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಅಂಡರ್ಾಸ್ ಅವ್ಯವಸ್ಥೆ: ಗ್ರಾಮದ ಸಮೀಪದ ರೈಲ್ವೆ ಹಳಿ ಬಳಿ ನಿರ್ಮಿಸಿರುವ ಅಂಡರ್ಾಸ್ನಲ್ಲಿ ಮಳೆನೀರು ನಿಲ್ಲುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಸ್ಥಳದಲ್ಲಿ ಹಲವು ಮಂದಿ ಬಿದ್ದು ಗಾಯಗೊಂಡಿರುವ ಘಟನೆಗಳಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 