ವಿಜಯಪುರ

ಡಾ. ಬಿ.ಆರ್‌. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲಸೌಕರ್ಯಗಳ ಕೊರತೆ: ಜಿಲ್ಲಾಧಿಕಾರಿಗೆ ಮನವಿ

ಡಾ. ಬಿ.ಆರ್‌. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೂಲಸೌಕರ್ಯಗಳ ಕೊರತೆ: ಜಿಲ್ಲಾಧಿಕಾರಿಗೆ ಮನವಿ

ಲೋಕದರ್ಶನ ವರದಿ 

         ವಿಜಯಪುರ : ನಗರದ ಡಾ. ಬಿ.ಆರ್‌. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಯುವ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 

ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಪ್ರತಿದಿನ ಕ್ರೀಡಾಭ್ಯಾಸಕ್ಕಾಗಿ ಜಿಲ್ಲಾ ಕ್ರೀಡಾಂಗಣವನ್ನು ಅವಲಂಬಿಸಿದ್ದಾರೆ. ಆದರೆ ಕ್ರೀಡಾಂಗಣದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ, ಸಮರ​‍್ಕ ನಿರ್ವಹಣೆಯ ಅಭಾವ ಹಾಗೂ ವಿವಿಧ ಶುಲ್ಕಗಳ ಹೆಚ್ಚಳದಿಂದಾಗಿ ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕ್ರೀಡಾಂಗಣವು ಕ್ರೀಡಾಪಟುಗಳ ಪ್ರತಿಭೆ ಬೆಳೆಸುವ ಕೇಂದ್ರವಾಗಬೇಕಾದರೆ, ಮೊದಲು ಅಲ್ಲಿನ ಮೂಲಸೌಕರ್ಯಗಳನ್ನು ಸಮರ​‍್ಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಪರಿಷತ್ ಆಗ್ರಹಿಸಿದೆ. 

ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಕಲ್ಪಿಸಲು ಆಗ್ರಹ 

ಕ್ರೀಡಾಂಗಣದಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕ್ರೀಡಾಭ್ಯಾಸಕ್ಕೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳಿಗೆ ಶುದ್ಧ ಕುಡಿಯುವ ನೀರು ಸಮರ​‍್ಕವಾಗಿ ದೊರೆಯುತ್ತಿಲ್ಲ. ಬೇಸಿಗೆ ಸೇರಿದಂತೆ ಎಲ್ಲ ಋತುಗಳಲ್ಲಿಯೂ ಈ ಸಮಸ್ಯೆ ಮುಂದುವರಿದಿದ್ದು, ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಗಮನಹರಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಅದೇ ರೀತಿ, ಸಂಜೆ ವೇಳೆಯಲ್ಲಿ ಕ್ರೀಡಾಭ್ಯಾಸ ನಡೆಸುವ ವಿದ್ಯಾರ್ಥಿಗಳಿಗೆ ಸಮರ​‍್ಕ ದೀಪಗಳ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಪ್ರಮುಖ ಸಮಸ್ಯೆಯಾಗಿದೆ. ಕ್ರೀಡಾಂಗಣದಲ್ಲಿ ಅಳವಡಿಸಿರುವ ಕೆಲವು ಬೆಳಕಿನ ವ್ಯವಸ್ಥೆಗಳು ಸಮರ​‍್ಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪರಿಣಾಮವಾಗಿ ಕ್ರೀಡಾಪಟುಗಳು ಕತ್ತಲಿನಲ್ಲಿಯೇ ಅಭ್ಯಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಹೊಸ ವಿದ್ಯುತ್ ದೀಪಗಳನ್ನು ಅಳವಡಿಸಿ, ಹಾಳಾಗಿರುವ ದೀಪಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ. 


ಸುದ್ದಿ ಓದಿ