ಜಿಲ್ಲಾಧ್ಯಕ್ಷರಾಗಿ ಲಕ್ಷ್ಮಣ ನೇಮಕ
ಮುಂಡಗೋಡ:ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ ಅಭಿಮಾನಿಗಳ ಸಂಘದ ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರನ್ನಾಗಿ ಲಕ್ಷ್ಮಣ ಬನಸೊಡೆ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಎಮ್.ಎಸ್.ಅಂಗಡಿ ಆದೇಶ ಹೊರಡಿಸಿದ್ದಾರೆ.
ಪಟ್ಟಣದ ಪರೀವೀಕ್ಷಣಾ ಮಂದಿರದಲ್ಲಿ ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ ಬನಸೊಡೆ ಜಿಲ್ಲಾದ್ಯಂತ ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ. ಕೆಲವು ದಿನಗಳಲ್ಲಿ ಡಿ.ಕೆ.ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು. ಈ ವೇಳೆ ಮುಖಂಡರಾದ ದೀಲೀಪ್ ರೋಕಡೆ, ಮಹಮ್ಮದ್ಗೌಸ್ ದುಂಡಶಿ ಮತ್ತು ರಜಾಖಾನ್ ಪಠಾಣ ಇದ್ದರು.