ಅಪಘಾತದಲ್ಲಿ ಗಾಯಗೊಂಡ ಶಾಂತಾ ಅವರ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar inquired about the health of Shanta, who was injured in an accident
ಬೆಳಗಾವಿ 08 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಸದಲ್ಲಿದ್ದ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಕ್ಕಿನಕೇರಿ ಗ್ರಾಮದ ಮುಖಂಡ ನಾರಾಯಣ ಬೆಳಗಾಂವ್ಕರ್ ಅವರ ಪತ್ನಿ ಶಾಂತಾ ಅವರು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿರುವ ವಿಷಯ ತಿಳಿದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶಾಂತಾ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿದ ಹೆಬ್ಬಾಳಕರ್ ಅವರು ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಕುಟುಂಬದ ಸದಸ್ಯರಿಂದ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು. ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಯ ಅಗತ್ಯವಿರುವ ಹಿನ್ನೆಲೆಯಲ್ಲಿ ತಮ್ಮ ಆಪ್ತ ಸಹಾಯಕರನ್ನು ಜೊತೆಗಿರಿಸಿ ಶಾಂತಾ ಅವರನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು. ವೈದ್ಯರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಚಿಕಿತ್ಸೆ ಹಾಗೂ ಸೂಕ್ತ ವೈದ್ಯಕೀಯ ಆರೈಕೆ ನೀಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 