ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
Lakshmi Hebbalkar issues instructions for the effective implementation of youth associations
ಬೆಳಗಾವಿ 20: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಸಂಘ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರೀಶೀಲಿಸಿದರು.
ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದರ ಜೊತೆಗೆ ಕ್ರೀಡೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ.
ಸಭೆಯಲ್ಲಿ ಹಿಂಡಲಗಾ, ಬೆನಕನಹಳ್ಳಿ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ, ಯೋಜನೆಯ ಅನುಷ್ಠಾನ ಹಾಗೂ ಇದುವರೆಗೆ ಆಗಿರುವ ಪ್ರಗತಿ ಕುರಿತು ವಿವರವಾಗಿ ಚರ್ಚಿಸಲಾಯಿತು. ಯೋಜನೆಯ ಪ್ರಯೋಜನ ಅರ್ಹ ಯುವಜನರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಹಿಂಡಲಗಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಬೆನಕನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಲಸಿದ್ದಪ್ಪ ಸುಳನ್ನವರ್ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ್ ಪಾಂಡೆ ಉಪಸ್ಥಿತರಿದ್ದರು.
ಸಾರ್ವಜನಿಕರ ಅಹವಾಲು ಆಲಿಕೆ : ಇದಕ್ಕೂ ಮೊದಲು ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೆಬ್ಬಾಳಕರ್ ಅವರ ಗಮನಕ್ಕೆ ತಂದರು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಹಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಕ್ರಮ ಕೈಗೊಂಡರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 