ಬಳ್ಳಾರಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಬಿ.ಶ್ರೀರಾಮುಲು ಅವರಿಂದ ಭೂಮಿಪೂಜೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಬಿ.ಶ್ರೀರಾಮುಲು ಅವರಿಂದ ಭೂಮಿಪೂಜೆ


ಬಳ್ಳಾರಿ 19: ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ವಾರ್ಡ್‌ ಸಂ.30,31 ಮತ್ತು 32ರಲ್ಲಿ ಕೈಗೆತ್ತಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಗುರುವಾರ ಸಂಜೆ ಭೂಮಿಪೂಜೆ ನೆರವೇರಿಸಿದರು. 

ನಗರದ ರಾಮಾಂಜಿನೇಯ ನಗರ, ಬಂಡಿಹಟ್ಟಿ ಹಾಗೂ ಅಜಾದ್ ನಗರಗಳಲ್ಲಿ 1.37 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆ ಸೇರಿದಂತೆ 7 ಕಾಮಗಾರಿಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು. ಗುಣಮಟ್ಟದಿಂದ ಕಾಮಗಾರಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಿದರು. 

ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಹಾನಗರ ಪಾಲಿಕೆ ಮೇಯರ್ ರಾಜೇಶ್ವರಿ ಸುಬ್ಬರಾಯ್ಡು, ಉಪಮೇಯರ್ ಮಾಲನ್ ಬಿ., ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಹಾಗೂ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು. 


ಸುದ್ದಿ ಓದಿ