ಮಾಜಿ ಸೈನಿಕರ ಸಂಘಕ್ಕೆ ಜಾಗ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸನ್ಮಾನ
Land allotted to Ex-Servicemen's Association: Minister Lakshmi Hebbalkar felicitated
ಬೆಳಗಾವಿ 09: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಜೈ ಗಣೇಶ ಎಕ್ಸ್ -ಸರ್ವಿಸ್ ಮ್ಯಾನ್ ಅಸೋಸಿಯೇಷನ್ (ಸರಸ್ವತಿ ನಗರ) ಕಟ್ಟಡ ನಿರ್ಮಾಣಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಾಗವನ್ನು ಮಂಜೂರು ಮಾಡಿಸಿ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸೋಮವಾರ ಅಸೋಸಿಯೇಷನ್ ಅಧ್ಯಕ್ಷರಾದ ಗಣಪತ್ ದೇಸಾಯಿ ಅವರ ನೇತೃತ್ವದ ಮಾಜಿ ಸೈನಿಕರು ಗೃಹ ಕಚೇರಿಗೆ ಆಗಮಿಸಿ, ಕೃತಜ್ಞತೆ ಸಲ್ಲಿಸಿ ಸಚಿವರನ್ನು ಸನ್ಮಾನಿಸಿದರು.
ಕಳೆದ 2 ವರ್ಷಗಳಿಂದ ಮಾಜಿ ಸೈನಿಕರು ಜಾಗಕ್ಕಾಗಿ ಪ್ರಯತ್ನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಕಟ್ಟಡಕ್ಕಾಗಿ ಜಾಗವನ್ನು ಮಂಜೂರು ಮಾಡಿಸಿ ಕೊಟ್ಟಿದ್ದಾರೆ. ದೇಶದ ರಕ್ಷಣೆಗಾಗಿ ಜೀವನವನ್ನೇ ಸವೆಸಿದ ಈ ವೀರ ಯೋಧರ ಕಲ್ಯಾಣಕ್ಕಾಗಿ ಶ್ರಮಿಸುವುದು ನನ್ನ ಆದ್ಯ ಕರ್ತವ್ಯ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಅನೇಕ ಮಾಜಿ ಸೈನಿಕರು ಮತ್ತು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 