ಸೆಸ್ ಸಂಸ್ಥೆಗೆ ಭೂಮಿ ನೀಡಿಕೆ ದೊಡ್ಡ ಹಗರಣ :ಸಿದ್ದರಾಮಯ್ಯ
ಬೆಂಗಳೂರು , ಸೆ 22 ಬಿಜೆಪಿ ಸರ್ಕಾರ ಸಮಾಜದಲ್ಲಿ ಜಾತಿ- ವ್ಯವಸ್ಥೆ ಮತ್ತು ವರ್ಣಾಶ್ರಮ ವ್ಯವಸ್ಥೆಯನ್ನು ಮತ್ತಷ್ಟು ಆಳವಾಗಿ ಬೇರೂರಿಸಿ, ಸಮಾಜದಲ್ಲಿ ಅಶಾಂತಿ, ಅರಾಜಕತೆ ಉಂಟುಮಾಡಲು ಹೊರಟಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಚಾಣಕ್ಯ ವಿಶ್ವ ವಿದ್ಯಾಲಯ ವಿಧೇಯಕವನ್ನು ಚರ್ಚೆಗೆ ಅವಕಾಶ ನೀಡದೆ ತರಾತುರಿಯಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿದೆ ಎಂದು ದೂರಿದರು.
ಆರ್ಎಸ್ಎಸ್ನವರು ಮನುವಾದಿಗಳು. ಮತ್ತೆ ಚತುರ್ವರ್ಣ ಜಾರಿ ಮಾಡಲು ಹೊರಟಿದ್ದಾರೆಚಾಣಕ್ಯ ವಿವಿಯನ್ನು ನಡೆಸುತ್ತಿರುವುದು ಸೆಸ್ ಸಂಸ್ಥೆ. ಸೆಸ್ ಸಂಸ್ಥೆ ನಡೆಸುತ್ತಿರುವವರು ಆರ್ ಎಸ್ಎಸ್ ನವರು. 50 ಕೋಟಿ ರೂಪಾಯಿಗೆ 116 ಎಕರೆ ಭೂಮಿ ನೀಡಲಾಗಿದೆ. ಸರ್ಕಾರ ರೈತರಿಗೆ 175 ಕೋಟಿ ರೂಪಾಯಿ ಪರಿಹಾರ ನೀಡಿದೆ. ರೈತರಿಂದ ಸ್ವಾಧೀನಪಡಿಸಿಕೊಂಡು ಭೂಮಿ ಅಭಿವೃದ್ಧಿಪಡಿಸಿರುವ ಭೂಮಿ 300ರಿಂದ 400 ಕೋಟಿ ರೂಪಾಯಿ ಬೆಲೆ ಬಾಳಲಿದೆ. ಸಂಸ್ಥೆಯಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಳೇ ಇಲ್ಲದಿದ್ದರೂ ಸೆಸ್ ಸಂಸ್ಥೆಗೆ ಸರ್ಕಾರ ಭೂಮಿ ನೀಡಿರುವುದೇ ನಿಜಕ್ಕೂ ಬಹಳ ದೊಡ್ಡ ಹಗರಣಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.