ಬ್ಯಾಡ್ಗಿ

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ


ಬ್ಯಾಡಗಿ: ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂಗಳ ಅನುದಾನವನ್ನು ನೀಡುವ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಕ್ರಮ ವಹಿಸಿದ್ದು, ಇದಕ್ಕೆ ಶಿಕ್ಷಕರೊಂದಿಗೆ ಶಾಲಾ ಸಮಿತಿಯವರು ಸಹ ತಮ್ಮ ಜವಾಬ್ದಾರಿಯನ್ನು ಅರಿತು ನಡೆಯಬೇಕಾಗಿದೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.  

ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಬಾರ್ಡ್‌ ಯೋಜನೆಯಡಿ ನಿರ್ಮಿಸಲಾದ ಎರಡು ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಸಣ್ಣ ನೀರಾವರಿ ಇಲಾಖೆಯಡಿ ಕೈಗೆತ್ತಿಕೊಂಡಿರುವ ಚೆಕ್ ಡ್ಯಾಂ ನಿರ್ಮಾಣ ಮತ್ತು ನಿರ್ಮಿತಿ ಕೇಂದ್ರದ ವತಿಯಿಂದ ಕೈಗೆತ್ತಿಕೊಂಡಿರುವ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ. ಕೇವಲ ವೈಯುಕ್ತಿಕ ಹಿತಾಸಕ್ತಿಗಿಂತ ತಾವು ಕಲಿತ ಶಾಲೆಯ  ಉಳಿವಿಗಾಗಿ ಸರ್ಕಾರದ ಜೊತೆ ಕೈಜೋಡಿಸಲು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಲ್ಲಿನ ಶಾಲಾಭಿವೃದ್ಧಿ ಸಮಿತಿಯೊಂದಿಗೆ ಶಾಲೆಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು  ಮುಂದಾಗುವಂತೆ ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ನೀಲಮ್ಮ ಕುಲಕರ್ಣಿ, ಸದಸ್ಯರಾದ ವಿಠ್ಠಲರಾವ್ ಜಾಧವ್, ನಾಸೀರ್ ಕೆಂಗನವರ, ಮಲ್ಲಮ್ಮ ಕಡತಿ, ನಾಗಮ್ಮ ವಾಲ್ಮೀಕಿ, ಬಿಇಓ ಬಿ.ಕೆ.ರುದ್ರಮುನಿ,  ಸಮಾಜ ಕಲ್ಯಾಣಾಧಿಕಾರಿ ಎಚ್‌.ಟಿ.ಲಮಾಣಿ, ಇಂಜನೀಯರುಗಳಾದ ರೇವಣೆಪ್ಪ, ವಿ.ಆಂಜನೇಯ, ಎಚ್‌.ಡಿ.ಶಾಂತಕುಮಾರ, ಗುತ್ತಿಗೆದಾರರಾದ ಅಜ್ಜಪ್ಪ ಬಿ.ಎಸ್, ಹೊಸಗೌಡ್ರ, ಪಿಡಿಓ ನಾಗರಾಜ ಹಡಗಲಿ, ಶಂಭುಲಿಂಗ ಕುಲಕರ್ಣಿ, ಶಿವಾಜಿರಾವ್ ಕದಂ,  ಸೇರಿದಂತೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು 


ಸುದ್ದಿ ಓದಿ