ರಾಣೆಬೆನ್ನೂರ

ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ


ಲೋಕದರ್ಶನ ವರದಿ 

ರಾಣಿಬೆನ್ನೂರ 15:  ನಗರದ ಸರ್ವಾನುಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಸಾಕಷ್ಟು ಅನುದಾನವನ್ನು ಬಿಡುಗಡೆಗೊಳಿಸುತ್ತಿದೆ. ಸಾರ್ವಜನಿಕರು ಸಹಕಾರ ನೀಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಹೇಳಿದರು. 

   ಸೋಮವಾರ ಇಲ್ಲಿನ ಈಶ್ವರನಗರದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ರಸ್ತೆಯ ಪಕ್ಕಾ ಗಟಾರ ನಿರ್ಮಾಣಕ್ಕೆ ನೀರಾವರಿ ನಿಗಮದ 1 ಕೋಟಿ ರೂ. ಅನುದಾನದಲ್ಲಿ ಪಕ್ಕಾ ಗಟಾರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡೋಣ. ನಂತರ ರಾಜ ಕಾರಣ ಮರೆತು ನಗರದ ಅಭಿವೃದ್ಧಿಗೆ ಸರ್ವರೂ ಶ್ರಮಿಸೋಣ ಎಂದರು. 

   ನಗರಸಭಾ ಸದಸ್ಯರಾದ ಹನುಮಂತಪ್ಪ ಹೆದ್ದೇರಿ, ಪ್ರಕಾಶ ಪೂಜಾರ, ರಾಜು ಅಡ್ಮನಿ, ಅಯ್ಯಪ್ಪಸ್ವಾಮಿ ದೇವಸ್ಥಾನದ ಅಧ್ಯಕ್ಷ ಮಂಜುನಾಥಸ್ವಾಮಿ ಮಣಿಗಾರ, ರಾಘವೇಂದ್ರ ಚಿನ್ನಿಕಟ್ಟಿ, ಶಿವಾನಂದ ಅಂಗಡಿ ಸೇರಿದಂತೆ ಮತ್ತಿತರರು ಇದ್ದರು. 


ಸುದ್ದಿ ಓದಿ