ಬಳ್ಳಾರಿ

ಲ್ಯಾಪ್‍ಟಾಪ್ ವಿತರಣಾ

ಲ್ಯಾಪ್‍ಟಾಪ್ ವಿತರಣಾ

ಬಳ್ಳಾರಿ 15: ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನದಲ್ಲಿ 2018-19ನೇ ಸಾಲಿನಲ್ಲಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ. ಅಧ್ಯಯನಕ್ಕಾಗಿ ಪ್ರವೇಶ ಪಡೆದ ಪರಿಶಿಷ್ಟ ಜಾತಿಯ 51 ಸಂಶೋಧನಾ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಪಂಗಡದ 19 ವಿದ್ಯಾರ್ಥಿಗಳಿಗೆ ಅನುದಾನದಲ್ಲಿ ಖರೀದಿಸಲಾಗಿದ್ದ ಲ್ಯಾಪ್‍ಟಾಪ್‍ಗಳನ್ನು ಕುಲಪತಿ ಡಾ.ಸ.ಚಿ.ರಮೇಶ ಅವರು ವಿತರಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿಶೇಷ ಘಟಕದ ಸಂಯೋಜನಾಧಿಕಾರಿ ಎ.ಕಾಶಿವಿಶ್ವನಾಥ ಅವರು ಸ್ವಾಗತಿಸಿದರು. ಗಣಕ ಕೇಂದ್ರದ ಸಹಾಯಕ ನಿರ್ದೇಶಕ ಎಸ್.ಕೆ.ವಿಜಯೇಂದ್ರ ಅವರು ವಂದಿಸಿದರು. ಲ್ಯಾಪ್‍ಟಾಪ್‍ಗಳನ್ನು ಪಡೆದ ಸಂಶೋಧನಾ ವಿದ್ಯಾರ್ಥಿಗಳು ಸಂತಸಪಟ್ಟರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಅವರು ಉಪಸ್ಥಿತರಿದ್ದರು.

ಸುದ್ದಿ ಓದಿ