ಎಸ್ಸೆಸ್ಸೆಲ್ಸಿ ಕನ್ನಡದಲ್ಲಿ ಹೆಚ್ಚು ಅಂಕ ಲ್ಯಾಪ್ ಟಾಪ್ ವಿತರಣೆ
ಹೂವಿನ ಹಡಗಲಿ:26- ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಾದ ಎಲ್ ಕೃಷ್ಣ ನಾಯ್ಕ್ ಲ್ಯಾಪ್ ಟಾಪ್ ವಿತರಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಗುರುವಾರ ಉತ್ತಂಗಿ ಸರ್ಕಾರಿ ಪ್ರೌಢಶಾಲೆಯಸಿ ಚಿರಾಗ್ 620, ಹೊಳಲು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಬಸವರಾಜ 610ಪಶ್ಚಿಮ ಕಾಲ್ವಿ ಸರ್ಕಾರಿ ಪ್ರೌಢಶಾಲೆಯ ವಿಷ್ಣುನಾಯ್ಕ್ 598ಮಹಾಜನದಹಳ್ಳಿ ಸರ್ಕಾರಿ ಪ್ರೌಢಶಾಲೆಯಎಂ ಪಿ ಎಂ ಗುರುಶಾಂತಯ್ಯ 589ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದರು.ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದವರಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ.ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಮುಂದಿನ ದಿನಗಳಲ್ಲಿ ಹೆಚ್ಚು ಸಾಧನೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಮುಖ್ಯ ಗುರುಗಳಾದ ಸುರೇಶ ಅಂಗಡಿ, ಪರುಶುರಾಮ ಎಂ ಸಿ ಗುರುಬಸವರಾಜ, ಕೆ ಲಿಂಗಪ್ಪ ಎಂ ಶಿವಲಿಂಗಪ್ಪ ಇತರರು ಹಾಜರಿದ್ದರು.