ಮತದಾರರ ಪಟ್ಟಿ ಸೇರ್ಪಡೆಗೆ ಇಂದು ಕೊನೆ: ಕಾವ್ಯರಾಣಿ
ಯಲಬುರ್ಗಾ : ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ್ಡಗೆ ಏ.11 ಕೊನೆಯ ದಿನವಾಗಿದ್ದು, ಇಂದೆ ಅರ್ಹ ಮತದಾರರು ಹೆಸರು ಸೇರೆ್ಡ ಮಾಡಿಸಿಕೊಳ್ಳಬೇಕು ಎಂದು ಮಾನ್ಯ ಚುನಾವಣಾಧಿಕಾರಿಗಳಾದ ಕಾವ್ಯರಾಣಿ ಕೆ.ವಿ ಅವರು ಹೇಳಿದರು.ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (ಓಗಿಖಕ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 ಭರ್ತಿ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.ಹೆಸರು ಖಚಿತಪಡಿಸಿಕೊಳ್ಳಲು ಸಲಹೆಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಈಗಲೇ ಖಚಿತಪಡಿಸಿಕೊಳ್ಳಬೇಕು. ಏ.11 ರವರೆಗೆ ಯುವ ಮತದಾರರು/ಹೆಸರು ಸೇರೆ್ಡಗೆ ಅವಕಾಶವಿರುತ್ತದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೆಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ