ಬೆಳೆ ವಿಮೆ ಯೋಜನೆ ಪ್ರಚಾರ ವಾಹಿನಿಗೆ ಚಾಲನೆ
ಹೊಸಪೇಟೆ (ವಿಜಯನಗರ),ಜು.5 ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಸಂಬಂಧಿಸಿದಂತೆ ರೈತರಿಗೆ ಬೆಳೆ ವಿಮೆ ಕುರಿತು ಮಾಹಿತಿ ನೀಡುವ ಪ್ರಚಾರ ವಾಹಿನಿಗೆ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಪ್ರಚಾರ ವಾಹಿನಿಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮಗಳಲ್ಲಿ ಸಂಚರಿಸಿ ವಿವಿಧ ಬೆಳೆಗಳಿಗೆ ನೀಡಲಾಗುವ ವಿಮೆ ಕುರಿತು ಮಾಹಿತಿ ನೀಡಲಿದೆ. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.