ಶಿಗ್ಗಾವ್

ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ನೇರ ಪ್ರಸಾರ ವೀಕ್ಷಣೆ

ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ನೇರ ಪ್ರಸಾರ ವೀಕ್ಷಣೆ

ಲೋಕದರ್ಶನ ವರದಿ

ಶಿಗ್ಗಾವಿ 01:  ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯ ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಮೈಸೂರಿನಲ್ಲಿ ಅದ್ಧೂರಿ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಶಿಗ್ಗಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಬೃಹತ್ ಎಲ್ಇಡಿ ಸ್ಕ್ರೀನ್ ಮೂಲಕ ಚಾಲನಾ ಕಾರ್ಯಕ್ರಮದಲ್ಲಿ ಇನ್ನೂರಕ್ಕೂ ಹೆಚ್ಚು ಮಹಿಳಾ ತಾಯಂದಿಯರು ನೇರ ಪ್ರಸಾರ ವೀಕ್ಷೀಸಿದರು.

ಕಾಂಗ್ರೆಸ್ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಗೋಷಿಸಿದ್ದ ಗೃಹಲಕ್ಷ್ಮಿ ಯೋಜನೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುವ ನಗದು ಸೌಲಭ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ನೂರಾರು ಮಹಿಳೆಯರು ವೀಕ್ಷಿಸಿದರು.

ಶಿಗ್ಗಾವಿ ಪುರಸಭೆ ವ್ಯಾಪ್ತಿಯಲ್ಲಿ 03, ಬಂಕಾಪೂರ ಪುರಸಭೆ ವ್ಯಾಪ್ತಿಯಲ್ಲಿ 3, ತಾಲ್ಲೂಕಿನ ಎಲ್ಲ 28 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೇರ ಪ್ರಸಾರದ ಕೇಂದ್ರಗಳೆಂದು ಗುರುತಿಸಲಾಗಿದ್ದು 

ಈ ಸಂದರ್ಭದಲ್ಲಿ ಸವಣೂರ ಕಾರ್ಯನಿರ್ವಾಹಕಾಧಿಕಾರಿ ಮಹಮ್ಮದ್ ಕೈಜರ್, ತಹಶೀಲ್ದಾರ ಸಂತೋಷ ಹಿರೇಮಠ, ಪುರಸಭೆ  ಮುಖ್ಯಾಧಿಕಾರಿ ಬಸವಲಿಂಗಯ್ಯ, ಸಿಡಿಪಿಓ ಗಣೇಶ ಲಿಂಗನಗೌಡ್ರ ಹಾಗೂ ಪಿಡಬ್ಲುಡಿ ಎಇಇ ಡಿ ಬಸವರಾಜ ಸೇರಿದಂತೆ ತಾಲೂಕಿನ ವಿವಿಧ  ಅಧಿಕಾರಿಗಳು, ಪುರಸಭೆ ಸಿಬ್ಬಂದಿಗಳು ಮಹಿಳೆಯರು ಇದ್ದರು 

ಸುದ್ದಿ ಓದಿ