ಗದಗ 07: ಕಾರ್ಮಿಕರು ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳಡಿಯಲ್ಲಿ ಕಾರ್ಮಿಕ ಸೌಲಭ್ಯಗಳು ಹಾಗೂ ಇತರೆ ವಿಷಯಗಳ ಬಗ್ಗೆ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಪಂ.ಸಿಇಒ ಭರತ್ ಎಸ್ ,ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸದೃಢ ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದು,ಕಾಮಿಕ ಸೌಲಭ್ಯಗಳು ಮತ್ತು ಇತರೆ ಮಾಹಿತಿಗಳನ್ನು ಒಳಗೊಂಡ ಆಟೋ ಸರಿಯಾಗಿ ಪ್ರಚಾರ ಮಾಡಿ ಮಾಹಿತಿಯನ್ನು ಕಾರ್ಮಿಕರಿಗೆ ತಿಳಿಸುವ ಕಾರ್ಯ ಆಗಬೇಕು ಹಾಗು ಕಾರ್ಮಿಕರು
ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಿಕೊಂಡು ಉತ್ತಮ ಜೀವನವನ್ನು ನಡೆಸಬೇಕು ಎಂದು ಜಿಪಂ.ಸಿಇಒ ಭರತ್ ಎಸ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರದ 1 ್ಘ2 ವೃತ್ತದ ಕಾರ್ಮಿಕ ನೀರೀಕ್ಷಕರು , ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.