ಹೂವಿನ ಹಡಗಲಿ

ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ

ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ

ಹೂವಿನ ಹಡಗಲಿ 11: ಮಕ್ಕಳಿಗೆ ಪರಿಸರದ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಶಾಸಕ ಕೃಷ್ಣಾನಾಯ್ಕ ಹೇಳಿದರು. ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ  ಸಸಿ ನೆಟ್ಟು ಚಾಲನೆ ನೀಡಿದರು. ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡುವ ಮೂಲಕ ಹಸಿರು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಿರಿ ಎಂದು ಹೇಳಿದರು.  

 ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ, ಅರಣ್ಯ ಇಲಾಖೆಯ ಪಿ ಗುಡ್ಡಪ್ಪಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ, ಉಪ ಪ್ರಾಂಶುಪಾಲ ಪಿ ಪ್ರಕಾಶ್, ಕಾಲೇಜು ಪ್ರಾಚಾರ್ಯ ಕೋರಿ ಹಾಲೇಶ್ ದೈಹಿಕ ಅಧೀಕ್ಷಕ ಎಸ್ ಮುಸ್ತಫಾ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಫಿ ಖವಾಸಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ಕಾಂತೇಶ್ ಹೆಚ್, ಶಿಕ್ಷಣ ಇಲಾಖೆಯ ಸಿಆರ್‌ಪಿಬಿಆರ್‌ಪಿ ಹಾಗೂ ಜಿಪಿಜಿ ಪ್ರೌಢಶಾಲೆಯ ಶಿಕ್ಷಕ, ಸಿಬ್ಬಂದಿ ಹಾಜರಿದ್ದರು. 


ಸುದ್ದಿ ಓದಿ