ವಿಜಯಪುರ

ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ನ್ಯಾಯಾಧೀಶ ಹರಿಶ ಎ.

ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ನ್ಯಾಯಾಧೀಶ ಹರಿಶ ಎ.
Law students play a significant role in conveying the ideals of the Constitution to the general pub

          ವಿಜಯಪುರ 27:  ಸಂವಿಧಾನದ ಆಶಯಗಳನ್ನು ಅರಿತುಕೊಂಡು, ಸಮಾಜದ ಬಡವರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳಿಗೆ ನ್ಯಾಯ ದೊರಕಿಸುವಲ್ಲಿ ಕಾನೂನು ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ. ಅವರು ಅಭಿಪ್ರಾಯ ಪಟ್ಟರು.ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,

           ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯನ್ನು ರಕ್ಷಿಸುವ ಮಹತ್ವದ ದಾಖಲೆಯಾಗಿದೆ. ಸಂವಿಧಾನದ ಆಶಯಗಳು ಕೇವಲ ನ್ಯಾಯಾಲಯಗಳಿಗೆ ಸೀಮಿತವಾಗದೆ ಸಮಾಜದ ಪ್ರತಿಯೊಂದು ಹಂತದಲ್ಲಿಯೂ ಅನುಷ್ಠಾನಗೊಳ್ಳಬೇಕು ಎಂದರು.ಸಂವಿಧಾನದ ಕಲಂ 39ಎ ಎಲ್ಲರಿಗೂ ಸಮಾನ ನ್ಯಾಯ ಹಾಗೂ ಉಚಿತ ಕಾನೂನು ನೆರವು ಒದಗಿಸುವ ಉದ್ದೇಶ ಹೊಂದಿದೆ.  

            ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರಗಳು ಮಹತ್ವದ ಕಾರ್ಯ ನಿರ್ವಹಿಸುತ್ತಿವೆ. ಕಾಲೇಜಿನಲ್ಲಿ ಕಾನೂನು ನೆರವು ಘಟಕವನ್ನು ಆರಂಭಿಸಿರುವುದು ಶ್ಲಾಘನೀಯವಾಗಿದ್ದು, ಕಾನೂನು ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಯ ನಡುವಿನ ಸೇತುವೆಯಾಗಿ ಅದು ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳು ಇದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗ್ರಾಮೀಣ ಪ್ರದೇಶಗಳಿಗೆ ಭೇಟಿ                     ನೀಡಿ ಜನರಲ್ಲಿ ಕಾನೂನು ಹಕ್ಕುಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.ಡಾ. ಬಿ.ಆರ್‌. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಯಲ್ಲಿ ಪಾಲ್ಗೊಂಡ ಮಹನೀಯರ ಕೊಡುಗೆಯನ್ನು ಸ್ಮರಿಸಿದ ಅವರು, ಕೇಶವಾನಂದ ಭಾರತಿ ಮತ್ತು ಮೇನಕಾ ಗಾಂಧಿ ಪ್ರಕರಣಗಳಂತಹ ಪ್ರಮುಖ ನ್ಯಾಯಾಂಗ ತೀಪುಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವುದು ಅಗತ್ಯವಾಗಿದೆ.  


ಸುದ್ದಿ ಓದಿ