ಶಾಲೆಗೆ ಶಾಸಕ ಸವದಿ ದಿಢೀರ್ ಭೇಟಿ: ಶಾಶ್ವತ ಕಟ್ಟಡದ ಭರವಸೆ
ಲೋಕದರ್ಶನರವದಿ
ಮಹಾಲಿಂಗಪುರ೨೬ : ಸ್ಥಳೀಯ ಮೂರಾಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಸಿದ್ದು ಸವದಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳು, ಊಟ, ವಸತಿ ಕೋಣೆ, ಕಲಿಕಾ ಕೊಠಡಿ, ಶೌಚಾಲಯ ಮತ್ತು ಶುಚಿತ್ವ ಪ್ರತಿಯೊಂದನ್ನೂ ಕೂಲಂಕುಷವಾಗಿ ಪರಿಶೀಲಿಸಿದರು.
ನಾಳಿನ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಕಾರ್ಯ ನಿವರ್ಾಹಕ ಅಧಿಕಾರಿ ಗಮನಕ್ಕೆ ತಂದು ಶಾಶ್ವತ ಕಟ್ಟಡದ ಜೊತೆ ಇತರೆ ಸೌಕರ್ಯಗಳನ್ನು ಶೀಘ್ರವಾಗಿ ಒದಗಿಸುವ ಭರವಸೆ ನೀಡಿದರು.
ತೇರದಾಳ ಭಾಜಪ ಗ್ರಾಮೀಣ ಘಟಕದ ಅಧ್ಯಕ್ಷ ಬಸನಗೌಡ ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಜಿ. ಎಸ್. ಗೊಂಬಿ, ಮಾಜಿ ಉಪಾಧ್ಯಕ್ಷ ಚನ್ನಬಸು ಹುರಕಡ್ಲಿ, ಸದಸ್ಯರಾದ ರಾಜು ಚಮಕೇರಿ, ಚನ್ನಬಸು ಯರಗಟ್ಟಿ ಹಾಗೂ ಶಿವು ಹುಣಶ್ಯಾಳ, ವಿಷ್ಣುಗೌಡ ಪಾಟೀಲ, ಶಾಲೆಯ ಪ್ರಾಂಶುಪಾಲ ಎಸ್. ಬಿ. ನಂದೆಪ್ಪಗೋಳ, ಶಿಕ್ಷಕ ಅಶೋಕ ಬಕರೆ, ಮುಖ್ಯೋಪಾಧ್ಯಾಯಿನಿ ಡಬ್ಲ್ಯೂ, ಜಿ ಅಲ್ಲಾಖಾನ್ ಮತ್ತು ಇತರರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 