ಸಚಿವ ಸಂಪುಟದಲ್ಲಿ ಲಕ್ಷ್ಮಣ ಸವದಿ ಸೇರೆ​‍್ಡ: ಗಾಣಿಗ ಸಮಾಜದಿಂದ ಸಂಭ್ರಮ

ಸಚಿವ ಸಂಪುಟದಲ್ಲಿ ಲಕ್ಷ್ಮಣ ಸವದಿ ಸೇರೆ​‍್ಡ: ಗಾಣಿಗ ಸಮಾಜದಿಂದ ಸಂಭ್ರಮ Laxman Savadi inducted into the Cabinet: Celebrations by the Ganiga community

 ತಾಳಿಕೋಟಿ 06 : ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಗಾಣಿಗ (ಸಜ್ಜನ) ಸಮಾಜ ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.  ಗುರುವಾರ ಪಟ್ಟಣದ  ಗಣಸಿರಿ ವೃತ್ತದಲ್ಲಿ ಗಾಣಿಗ ಸಮಾಜದ ಮುಖಂಡರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಚಿವ ಲಕ್ಷ್ಮಣ ಸವದಿ ಅವರ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಅಸ್ಕಿ ಫೌಂಡೇಶನ್ ಕೊಣ್ಣೂರಿನ ಅಧ್ಯಕ್ಷ ಸಿ.ಬಿ. ಅಸ್ಕಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಸಂತಸದ ವಿಚಾರವಾಗಿದೆ. ಜೊತೆಗೆ ಸಕ್ಕರೆ ಖಾತೆಯ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಿದರು.

ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದ ಮೊದಲ ಹಂತದಲ್ಲೇ ಸ್ಥಾನ ಸಿಗಬೇಕಾಗಿತ್ತು. ಅವರ ಅಪಾರ ರಾಜಕೀಯ ಅನುಭವದಿಂದ ಸಹಕಾರಿ ಕ್ಷೇತ್ರ ಹಾಗೂ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು. ಗಾಣಿಗ ಸಮಾಜದ ಪ್ರಮುಖರಾದ ಕಾಶಿನಾಥ ಪಿ. ಸಜ್ಜನ ಮಾತನಾಡಿ, ಸಮಾಜದ ಹಿರಿಯ ರಾಜಕಾರಣಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಸಮಾಜ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಉತ್ತಮ ನಿರ್ಧಾರವಾಗಿದೆ. ಭಗವಂತ ಅವರಿಗೆ ಇನ್ನಷ್ಟು ಶಕ್ತಿ, ಆರೋಗ್ಯ ಮತ್ತು ಯಶಸ್ಸು ನೀಡಲಿ ಎಂದು ಹಾರೈಸಿದರು.  

ಸಂಭ್ರಮಾಚರಣೆಯಲ್ಲಿ ಗಾಣಿಗ ಸಮಾಜದ ಅಧ್ಯಕ್ಷ ಪ್ರಕಾಶ ಸಜ್ಜನ, ಉಪಾಧ್ಯಕ್ಷ ತಿಪ್ಪಣ್ಣ ಸಜ್ಜನ, ಪುರಸಭೆ ಮಾಜಿ ಸದಸ್ಯ ಮುತ್ತಪ್ಪ ಚಮಲಾಪುರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.