ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಕಲಿಕಾ ಹಬ್ಬ ಅಗತ್ಯ: ಬಿಇಓ ಮುಜಾವರ
Learning festival is necessary to create interest in learning: BEO Mujawara
ಇಂಡಿ 06: ಕಲಿಕಾ ಹಬ್ಬ’ವು ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ಅವರ ಪ್ರತಿಭೆಯನ್ನು ಹೊರತಂದು, ಶಿಕ್ಷಣದ ಗುಣಮಟ್ಟ ಸುಧಾರಿಸುವ ವಿನೂತನ ಕಾರ್ಯಕ್ರಮವಾಗಿದೆ ಎಂದು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನ್ನಿಸ್ ಮುಜಾವರ ಹೇಳಿದರು.
ಮಂಗಳವಾರದಂದು ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕಾ ಹಬ್ಬವು ವಿಶೇಷವಾಗಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಚಟುವಟಿಕೆಗಳ ಮೂಲಕ ಮೋಜಿನ ಮತ್ತು ಆಸಕ್ತಿಪೂರ್ಣ ಕಲಿಕೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಮಾತನಾಡಿ ಈ ಕಲಿಕಾ ಹಬ್ಬವು ಮಕ್ಕಳಲ್ಲಿ ಓದು, ಬರವಣಿಗೆ, ಗಣಿತ ಕೌಶಲಗಳನ್ನು ವೃದ್ಧಿಸಲು ಅನೇಕ ಚಟುವಟಿಕೆಗಳನ್ನು ಆಯೋಜಿಸಿ, ಮಕ್ಕಳ ಕಲಿಕೆಗೆ ಒತ್ತು ನೀಡುತ್ತದೆ ಎಂದು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ವೈ ಟಿ ಪಾಟೀಲ ಮಾತನಾಡಿ, ಈ ಕಲಿಕಾ ಹಬ್ಬದಿಂದ ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯ ಬೆಳೆಯುತ್ತದೆ ಎಂದು ಹೇಳಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಚಾಂದಪಾಷಾ ಜಮಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಬೋರಾಮಣಿ, ಶಿಕ್ಷಕರ ಸಂಘದ ಖಜಾಂಚಿ ಆನಂದ ಕೆಂಭಾವಿ, ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.
ಜಿಓಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲಾಭಕ್ಷ ವಾಲಿಕಾರ, ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಬಸೀರ್ ಅಹಮದ್ ಇನಾಮದಾರ, ಸಿ ಆರ್ ಪಿ ಬಾದಶಾ ಚಪ್ಪರಬಂದ, ಪಿ ಎಂ ಪಟೇಲ್, ಆಯ್ ಎ ಸಿಕಲಗಾರ, ಭಾಷಾಸಾಬ ಕುಮಸಗಿ, ನಿರ್ದೇಶಕ ಪಿ ಎಸ್ ಚಾಂದಕವಠೇ, ಎ ಎಂ ಹೊಸೂರ, ಶಿಕ್ಷಕ ಶಹಾಹುಸೇನ್ ಮಕಾನದಾರ, ಗ್ರಾಮಸ್ತರಾದ ಜೈನುದ್ದೀನ್ ಜಹಾಗೀರದಾರ, ಅಶ್ರಫ್ ಪಟೇಲ್, ಅನ್ವರ ಗೌಂಡಿ, ಖಾಲಿದ ಖುರೇಷಿ, ರಫೀಕ್ ಭಾಸಗಿ, ಮಹ್ಮದ್ ಹನೀಫ್ ಜಹಾಗೀರದಾರ ಸೇರಿದಂತೆ ಅನೇಕ ಶಿಕ್ಷಕರು, ಪಾಲಕರು ಪಾಲ್ಗೊಂಡಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 