ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು: ಐಹೊಳೆ
Lecturers should provide good education to students: Aihole
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು: ಐಹೊಳೆ
ರಾಯಬಾಗ 02: ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಯಾವದೇ ಭೇದಭಾವ ಮಾಡದೇ ಎಲ್ಲ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.ಮಂಗಳವಾರ ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಖಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆ ಮತ್ತು ಆದರ್ಶ ವಿದ್ಯಾಲಯ (ಪ್ರೌಢ ಶಾಲೆ) ಇರುವುದರಿಂದ ಇಲ್ಲಿನ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಪಡೆಯಲು ಅನುಕೂಲವಾಗಲು ಸರ್ಕಾರ ಆದರ್ಶ ವಿದ್ಯಾಲಯದಲ್ಲಿ ಪದವಿಪೂರ್ವ ಕಾಲೇಜ ಪ್ರಾರಂಭಿಸಿದ್ದು, ಇಲ್ಲಿನ ವಿದ್ಯಾರ್ಥಿಗಳು, ಮುಖ್ಯವಾಗಿ ಹೆಣ್ಣು ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಹೊಂದಬೇಕೆಂದರು.ವಿದ್ಯಾರ್ಥಿಗಳು ಗುರುವಿನಲ್ಲಿ ಅಚಲ ವಿಶ್ವಾಸ ಇಟ್ಟು ಶ್ರಮ ವಹಿಸದರೆ, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಶಿಕ್ಷಣ ಅಳವಡಿಸಿಕೊಂಡು, ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಹೊಂದಬೇಕು ಎಂದು ಕರೆ ನೀಡಿದರು.ಪ್ರಾಚಾರ್ಯ ಬಿ.ಎಮ್.ಹಾದಿಮನಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಸಂಜೀವ ನಾಯಿಕ, ಪಿಡಿಒ ನೂರಅಹ್ಮದ ಕುಡಚಿ, ಸದಾಶಿವ ಘೋರೆ್ಡ, ಸಂಜು ಒಡೆಯರ, ಪಿ.ಎ.ನಾಯಿಕ, ವಿವೇಕ ಹಟ್ಟಿಕರ, ಬಸವರಾಜ ಖಿಚಡೆ, ರಾಜು ನಾಯಿಕ, ಚಿದಾನಂದ ಚೌಗಲಾ, ಚಂದ್ರಕಾಂತ ಒಡೆಯರ, ಬಸವರಾಜ ನಾಯಿಕ, ಸುಶ್ಮಿತಾ ಕಾಂಬಳೆ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.ಫೋಟೊ: 02 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಶಾಸಕ ಡಿ.ಎಮ್.ಐಹೊಳೆ ಉದ್ಘಾಟಿಸಿದರು. ಫೋಟೊ: 02 ರಾಯಬಾಗ 2ಎಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಶಾಸಕ ಡಿ.ಎಮ್.ಐಹೊಳೆ ಉದ್ಘಾಟಿಸಿ ಮಾತನಾಡುತ್ತಿರುವುದು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 