ಕಾನೂನು ಅರಿವು ನೆರೆವು ಕಾರ್ಯಕ್ರಮ .. .
ಹಗರಿಬೊಮ್ಮನಹಳ್ಳಿ 26: ಹಗರಿಬೊಮ್ಮನಹಳ್ಳಿ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಅವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಭಾರತೀಯ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ನೆರೆವು ಕಾರ್ಯಕ್ರಮ ಜರುಗಿತು. ಸಿವಿಲ್ ನ್ಯಾಯಾಧೀಶರಾದ ಭಾಗ್ಯಲಕ್ಷ್ಮೀ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಮುಖ್ಯ ಅತಿಥಿಯಾಗಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಹಾಗೂ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಭಾಗವಹಿಸಿದ್ದರು. ತಾಲೂಕು ವಕೀಲರ ಸಂಘದ ಪದಾಧಿಕರಿಗಳು ಹಾಗೂ ಸದಸ್ಯರು ಇದ್ದರು.ಕಾರ್ಯಕ್ರಮದಲ್ಲಿ ಪದ್ಮಶ್ರೀ ಪರುಸ್ಕೃತೆ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಿದರು.