ಕಾನೂನು ಅರಿವು-ನೆರವು ಕಾರ್ಯಕ್ರಮ
ಮುಂಡಗೋಡ:ತಾಲೂಕಿನ ಮಳಗಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮುಂಡಗೋಡ, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಮಳಗಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಲಭೂತ ಕರ್ತವ್ಯಗಳು ಹಾಗೂ ಮೂಲಭೂತ ಹಕ್ಕುಗಳ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಹಾಯಕ ಸರಕಾರಿ ಅಭಿಯೋಜಕಿ ಉಮಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಆರ್.ಬಿ.ಹುಬ್ಬಳ್ಳಿ ಮೂಲಭೂತ ಕರ್ತವ್ಯಗಳು ಹಾಗೂ ಮೂಲಭೂತ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಗ್ರಾಮಿಣಾಭಿವೃದ್ಧಿ ಅಧಿಕಾರಿ ಮಹಾಬಲೇಶ್ವರ ನಾಯ್ಕ ಸಂಸ್ಥೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜ್ನ ಪ್ರಾಂಶುಪಾಲ ಜಿ.ಎನ್.ಹೆಗಡೆ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಸಿಬ್ಬಂದಿ ಉಪಸ್ಥಿತರಿದ್ದರು. ವಕೀಲ ಆರ್.ಎಮ್.ಮಳಗೀಕರ ಕಾರ್ಯಕ್ರಮ ನಿರೂಪಿಸಿದರು. ವಕೀಲ ಪ್ರಕಾಶ ಲಂಬಾಣಿ ವಂದಿಸಿದರು.