ರಾಣೆಬೆನ್ನೂರ

ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ರಾಣೆಬೆನ್ನೂರು, ಆ.5: ತಾಲೂಕಿನ ಕವಲೆತ್ತು ಗ್ರಾಮದ ಬಿ.ಇ.ಜೆ.ಎಸ್‌.ಎಸ್‌. ಶ್ರೀ ದುರ್ಗಾಮಾತಾ ಪ್ರೌಢಶಾಲೆಯಲ್ಲಿ ಮಾನವ ಕಳ್ಳಸಾಗಣೆ ತಡೆ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ. ಪಾರ್ವತಮ್ಮ ಹುಂಡೇಕಾರ ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಅಜ್ಜಪ್ಪ ಬಿಜ್ಜೂರ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ಪ್ಯಾನಲ್ ನ್ಯಾಯವಾದಿ ಎಚ್‌.ಎಸ್‌. ಸಿದ್ದಪ್ಪ ಅವರು ಮಾನವ ಕಳ್ಳಸಾಗಣೆ ತಡೆ ಕಾಯ್ದೆ ಹಾಗೂ ಮೋಟಾರು ವಾಹನ ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.  

ಮುಖ್ಯ ಅತಿಥಿಗಳಾಗಿ ಕುಮಾರ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ನಿಂಗಪ್ಪ ಕರಕಣ್ಣವರ, ವಕೀಲರ ಸಂಘದ ಉಪಾಧ್ಯಕ್ಷ ಎಚ್‌.ಎಚ್‌. ತಿಮ್ಮೇನಹಳ್ಳಿ, ಕಾರ್ಯದರ್ಶಿ ಸುರೇಶ್ ದ್ಯಾವಕ್ಕಳ್ಳವರ, ಅಪರ ಸರ್ಕಾರಿ ವಕೀಲ ಟಿ.ಎಸ್‌. ಜಂಗರಡ್ಡೇರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ವಿಜಯಾ ಬಣಕಾರ, ಕವಲೆತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಎಚ್‌. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.  ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾನೂನು ಅರಿವು ಕುರಿತು ಮಾಹಿತಿ ಪಡೆದರು. 


ಸುದ್ದಿ ಓದಿ