ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ
ಲೋಕದರ್ಶನ ವರದಿ
ಕುಷ್ಟಗಿ 30: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಮೇ 31ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಏರಿ್ಡಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿ ದೇವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿ ದೇವಿ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಶಂಭುಲಿಂಗಯ್ಯ ಮೂಡಿ ಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಸ್ ರೆಡ್ಡಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ವಿಶೇಷವಾಗಿ ಉಪನ್ಯಾಸ ನೀಡುವರು. ಉಪನ್ಯಾಸಕ ಮಹಾಂತೇಶ ಕಾರ್ಯಕ್ರಮವನ್ನು ನಿರೂಪಿಸಿದರು.