ಮುರುವಿನ ಕಟ್ಟೆ ಬಗ್ಗೆ ಸುಳ್ಳು ಮಾಹಿತಿಯನ್ನು ಸಾಮಾಜಿಜಾಲತಾಣದಲ್ಲಿ ಹರಡುವವರ ವಿರುದ್ಧ ಕಾನೂನು ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
Legal action against those spreading false information about Muruvina Katte on social media: Distric
ಕಾರವಾರ 26: ಭಟ್ಕಳ ನಗರದ ಮೂಲಕ ಹಾದುಹೋಗುವ ರಾ.ಹೆ-66 ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ಹಾಗೆ ಅಮ್ಮನವರ ಹೊರೆಯನ್ನಿಡುವ ಮುರುವಿನಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರವರಿಂದ ರೋಡ್ ಆನ್ ವರ್ಕ ವ್ಯಾಪ್ತಿಯಲ್ಲಿ ಲಭ್ಯ ಸರ್ಕಾರಿ ಜಮೀನಿನಲ್ಲಿ ದಿ: 24.5.2026 ರಂದು ಕೆಂಪು ಕಲ್ಲಿನಿಂದ ಕಟ್ಟಲಾಗುತ್ತಿರುವ ಸಂರಚನೆಯನ್ನು , ಯಾರೋ ಕಿಡಿಗೇಡಿಗಳು ನಾಶಪಡಿಸಿದ್ದು, ಸದರಿಯವರ ಮೇಲೆ ಎಲ್ಲ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂಬುದಾಗಿ ಈಗಾಗಲೇ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನೆನಪಿಸಿದ್ದಾರೆ.
ಮುಂದುವರೆದು ಸಾಂಪ್ರದಾಯಿಕವಾಗಿ ಅಮ್ಮನವರ ಹೊರೆಯನ್ನಿಡಲಾಗುತ್ತಿರುವ ಮೂಲ ಕಟ್ಟೆಯಿರುವ ಮುರುವಿನಕಟ್ಟೆ ಸ್ಥಳವು ಯಥಾಸ್ಥಿತಿಯಲ್ಲಿರುವ ಬಗ್ಗೆಯೂ ಸಹ ಈಗಾಗಲೇ ಮಾಧ್ಯಮದ ಮೂಲಕ ತಿಳಿಯಪಡಿಸಲಾಗಿರುತ್ತದೆ.ಆದರೆ ಕೆಲವು ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಮೂಲ ಮುರುವಿನಕಟ್ಟೆಗೆ ಧಕ್ಕೆಯಾಗಿರುವ ರೀತಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದು ಕಂಡುಬಂದಿದೆ.
ಕಾರಣ ಸಾರ್ವಜನಿಕರು ಇಂತಹ ಸುದ್ದಿಗಳನ್ನ ನಂಬಬಾರದಾಗಿ ಜಿಲ್ಲಾಧಿಕಾರಿ ಕೋರಿದ್ದಾರೆ. ಸಾಂಪ್ರದಾಯಿಕವಾಗಿ ಅಮ್ಮನವರ ಹೊರೆಯನ್ನಿಡುವ ಮೂಲ ಸ್ಥಳ ಮುರುವಿನಕಟ್ಟೆಯು ಯಥಾಸ್ಥಿತಿಯಲ್ಲಿರುತ್ತದೆ ಎಂಬುದಾಗಿ ಮತ್ತೊಮ್ಮೆ ಸ್ಪಷ್ಟಿಕರಣ ನೀಡಲಾಗಿದೆ.ಮುಂದುವರೆದು, ಯಾರಾದರೂ ಇಂತಹ ಸುಳ್ಳು ಹಾಗೂ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚಿಸಿದ್ದಾರೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 