ಮಹಿಳೆಯರು ಹಾಗೂ ಸಮಾಜದ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಸುನಂದ ಕುರಬೆಟ್
ಲೋಕದರ್ಶನ ವರದಿ
ಗೋಕಾಕ, 29: ಸಮಾಜದ ಸುರಕ್ಷತೆಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಕಾನೂನು ಅರಿವು ಹೊಂದುವುದು ಅಗತ್ಯ ಎಂದು ರಾಯಬಾಗದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಸುನಂದ ಎಸ್. ಕುರಬೆಟ್ ಹೇಳಿದರು.
ಸಮೀಪದ ಅರಭಾವಿ ಮಠದ ಶ್ರೀ ದುರದುಂಡೀಶ್ವರ ಮಠ ಟ್ರಸ್ಟ್ನ ಶ್ರೀ ಮಹಾಂತ ಶಿವಯೋಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ದೌರ್ಜನ್ಯ ತಡೆ ಘಟಕದ ವತಿಯಿಂದ ಆಯೋಜಿಸಿದ್ದ ‘ಸುರಕ್ಷಿತ ್ಠ್ಕ್ಣಹಹಿ್ಕ್ಲ್ಕೂ ಹಕ್ಕು, ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಕೇವಲ ಕಾಲೇಜು ಆವರಣಕ್ಕೆ ಸೀಮಿತವಾಗಿಲ್ಲ. ಉದ್ಯೋಗ ಸ್ಥಳ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಹಾಗೂ ಸಮಾಜದ ಸುರಕ್ಷತೆಗಾಗಿ ಕಾನೂನು ಅರಿವು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ವೈ. ಪಾಟೀಲ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಆದರೆ ತಂತ್ರಜ್ಞಾನ ಯುಗದಲ್ಲಿಯೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ. ಮಹಿಳೆಯರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗೆ ಕಾನೂನು ಅರಿವು ಮೂಡಿಸುವುದು ಅಗತ್ಯ ಎಂದು ಹೇಳಿದರು.
ಪ್ರಾಚಾರ್ಯ ಎನ್.ಎನ್. ಬಂಬಲಾಡಿ ಮಾತನಾಡಿ, ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಯುವ ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂದರು. ಕಾರ್ಯಕ್ರಮದ ಸಂಯೋಜಕರಾದ ಸುನಂದ ಹನುಮನ್ನವರ ಉಪಸ್ಥಿತರಿದ್ದರು. ಪ್ರಿಯಾಂಕ ಹಾದಿಮನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.