ಧಾರವಾಡ - ಹುಬ್ಬಳ್ಳಿ

ಮಕ್ಕಳ ರಕ್ಷಣೆ, ಮಾದಕವಸ್ತು ದುಷ್ಪರಿಣಾಮ ಕುರಿತು ಕಾನೂನು ಅರಿವು

ಮಕ್ಕಳ ರಕ್ಷಣೆ, ಮಾದಕವಸ್ತು ದುಷ್ಪರಿಣಾಮ ಕುರಿತು ಕಾನೂನು ಅರಿವು

ಲೋಕದರ್ಶನ ವರದಿ 

ಧಾರವಾಡ 25 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಪೋಕ್ಸೊ ಕಾಯ್ದೆ ಮತ್ತು ಮಾದಕವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎನ್‌.ವಿ. ವಿಜಯ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಹಿತಾಸಕ್ತಿ ಹಾಗೂ ದೈಹಿಕ-ಮಾನಸಿಕ ಸುರಕ್ಷತೆಗೆ ಆದ್ಯತೆ ನೀಡಬೇಕು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ನ್ಯಾಯ ಒದಗಿಸಲು ಪೋಕ್ಸೊ ಕಾಯ್ದೆಯಡಿ ವಿಶೇಷ ನ್ಯಾಯಾಲಯಗಳಿವೆ ಎಂದು ತಿಳಿಸಲಾಯಿತು. ಮಾದಕವಸ್ತು ವ್ಯಸನದಿಂದ ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಗಣ್ಯರು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಸೇರಿದಂತೆ ನ್ಯಾಯಾಂಗ, ಶಿಕ್ಷಣ ಕ್ಷೇತ್ರದ ಅಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಸುದ್ದಿ ಓದಿ