ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ *ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಗೆಲುವು ಖಚಿತ: ಅಮ್ಜದ್ ಪಟೇಲ್ ವಿಶ್ವಾಸ
ಕೊಪ್ಪಳ 23: ಕಲ್ಯಾಣ ಕರ್ನಾಟಕ ಕಲಬುರ್ಗಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶರಣಪ್ಪ ಮಟ್ಟೂರು ರವರು ಗೆಲವು ಸಾಧಿಸಲಿದ್ದಾರೆ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಅಮ್ಜದ್ ಪಟೇಲ್ ದೃಢ ವಿಶ್ವಾಸ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದಾರೆ, ಅವರು ಶುಕ್ರವಾರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ಯ ಮತದಾನ ಪೂರ್ಣ ಗೊಂಡ ಬಳಿಕ ಮಾತನಾಡಿ ತಮ್ಮ ಪ್ರತಿಕ್ರಿಯೆ ನೀಡಿ ಸದರಿ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರು ಹೆಚ್ಚಿನ ರೀತಿಯಲ್ಲಿ ಮತದಾನ ಮಾಡಿದ್ದಾರೆ ಮತದಾರರ ಒಲವು ಕಾಂಗ್ರೆಸ್ ಕಡೆಗೆ ಹೆಚ್ಚಾಗಿ ಕಂಡು ಬಂದಿರುವುದರಿಂದ ಈ ಬಾರಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದ್ದಾರೆ, ಶರಣಪ್ಪ ಮಟ್ಟೂರು ರವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಹೊಂದಿದ್ದು ಶಿಕ್ಷಕರ ಹಿತಾಸಕ್ತಿ ಕಾಪಾಡಲು ಭದ್ಧರಾಗಿದ್ದಾರೆ, ಶಿಕ್ಷಕರ ಬೇಡಿಕೆಗಳು ,ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಹಾಗೂ ಶಿಕ್ಷಕರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡುವ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಶಿಕ್ಷಕ ಮತದಾರರು ಬೆಂಬಲಿಸಿರುವುದರಿಂದ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಗೆಲುವು ಸಾಧಿಸುವದು ಬಹುತೇಕ ಖಚಿತವಾಗಿದೆ ಎಂದರು ,ಮುಂದುವರೆದು ಮಾತನಾಡಿ ಕಾಂಗ್ರೆಸ್ ಪಕ್ಷದ ಸಂಘಟಿತ ಪ್ರಯತ್ನ ಅಭ್ಯರ್ಥಿಯ ಪರವಾಗಿ ನಡೆದ ಪ್ರಚಾರ ಹಾಗೂ ಶಿಕ್ಷಕರ ವ್ಯಾಪಕ ಬೆಂಬಲ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಸಾಧ್ಯತೆ ಇದೆ , ಸಂಪೂರ್ಣವಾಗಿ ಬೆಂಬಲಿಸುವುದರ ಮೂಲಕ ಗೆಲುವಿಗೆ ಮತದಾರರು ಸಹಕರಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಬಹುತೇಕ ಸದರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ರವರು ಗೆಲವು ಸಾಧಿಸಲಿದ್ದಾರೆ ಮತದಾನ ಸಂದರ್ಭದಲ್ಲಿ ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಕೂಡ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಕೊಪ್ಪಳದಲ್ಲಿ ಕೂಡ ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರ ನೇತೃತ್ವದಲ್ಲಿ ಎಲ್ಲಾ ಮುಖಂಡರು ಸೇರಿ ಮತದಾನದ ಪ್ರಕ್ರಿಯೆ ಯಲ್ಲಿ ಪಾಲ್ಗೊಂಡು ಅಭ್ಯರ್ಥಿ ಪರ ಒಗ್ಗೂಡಿ ಶ್ರಮಿಸಿದ್ದಾರೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದೆ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಅಮ್ಜದ್ ಪಟೇಲ್ ತಮ್ಮ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ,